Breaking News

ಮಹಾರಾಷ್ಟ್ರದ ಚುನಾವಣಾ ಅಖಾಡಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಎಂಟ್ರಿ

Spread the love

ಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಅಖಾಡಕ್ಕೆ ಧುಮುಕಿದ್ದಾರೆ. ಕರ್ನಾಟಕ ಗಡಿಗೆ ಹೊಂದಿಕೊಂಡಂತೆ ಇರುವ ಚಂದಗಡ್ ವಿಧಾನಸಭಾ ಕ್ಷೇತ್ರದ ತುಡಯೆ ಗ್ರಾಮದಲ್ಲಿ ಮಹಾ ವಿಕಾಸ ಅಘಾಡಿ (ಎಂವಿಎ) ಅಭ್ಯರ್ಥಿ ನಂದಾತಾಯಿ ಕುಪೆಕರ್ ಪರ ಸಚಿವ ಲಕ್ಷ್ಮೀ ಹೆಬ್ಬಾಳಕರ್ ಪ್ರಚಾರ ನಡೆಸಿದರು.

 

ಈ ವೇಳೆ ಮಾತನಾಡಿದ ಸಚಿವರು, ಮಹಾರಾಷ್ಟ್ರ ಮತ್ತು ರಾಷ್ಟ್ರದ ಅಭಿವೃದ್ಧಿ ದೃಷ್ಟಿಯಿಂದ ಎಂವಿಎ ಒಕ್ಕೂಟವನ್ನು ಬೆಂಬಲಿಸಬೇಕು. ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಸಾಕಷ್ಟು ಬದಲಾವಣೆ ಆಗಿದೆ. ಪ್ರತಿ ತಿಂಗಳು ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯಡಿ 2 ಸಾವಿರ ನೀಡಲಾಗುತ್ತಿದೆ. ಕೊಟ್ಟ ಮಾತಿನಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ‌ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಾರಥ್ಯದ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ನಮ್ಮ ರಾಜ್ಯ ಸಾಕಷ್ಟು ಅಭಿವೃದ್ಧಿಯಾಗುತ್ತಿದೆ, ಅದೇ ಮಾದರಿಯಲ್ಲಿ ಮಹಾರಾಷ್ಟ್ರ ಕೂಡ ಅಭಿವೃದ್ಧಿ ಆಗಬೇಕಾದರೆ ಎಂವಿಎ ಅಧಿಕಾರಕ್ಕೆ ಬರಬೇಕು ಎಂದರು.

ಮಹಾರಾಷ್ಟ್ರದಲ್ಲಿ ಎಂವಿಎ ಅಧಿಕಾರಕ್ಕೆ ಬಂದರೆ ಕರ್ನಾಟಕ ಎಲ್ಲಾ ರೀತಿಯಲ್ಲೂ ಸಹಕಾರ ನೀಡಲಿದೆ. ಚಂದಗಡ್ ಕ್ಷೇತ್ರದಿಂದ ನಂದಾತಾಯಿ ಅವರು ಗೆದ್ದರೆ, ನಾನು ಬೆಳಗಾವಿ ಗ್ರಾಮೀಣ ಕ್ಷೇತ್ರವನ್ನು ಅಭಿವೃದ್ಧಿ ಮಾಡಿರುವ ಮಾದರಿಯಲ್ಲೆ ಅವರು ಕೂಡ ಈ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಲಿದ್ದಾರೆ. ಚಂದಗಡ್ ಕ್ಷೇತ್ರದ ಸರ್ವತೋಮುಖದ ಅಭಿವೃದ್ಧಿಗಾಗಿ ನಂದಾತಾಯಿ‌ ಕುಪೆಕರ್ ಅವರನ್ನು ಬೆಂಬಲಿಸಿ ಎಂದು ಮತದಾರರಲ್ಲಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಮನವಿ ಮಾಡಿದರು.

ಎನ್ ಸಿಪಿ ವರಿಷ್ಠ ಶರದ್ ಪವಾರ್ ಅವರ ಹೆಸರಿಗೆ ಮಹಾರಾಷ್ಟ್ರದಲ್ಲಿ ಬಹಳ ದೊಡ್ಡ ಶಕ್ತಿ ಇದ್ದು, ದೊಡ್ಡ ಪ್ರಮಾಣದಲ್ಲಿ ಅಭಿಮಾನಿಗಳನ್ನು ಹೊಂದಿದ್ದಾರೆ. ಕಾಂಗ್ರೆಸ್, ಶರದ್ ಪವಾರ್ ಸಾರಥ್ಯದ ಎನ್ ಸಿಪಿ‌ (ಎಸ್ ಪಿ) ಹಾಗೂ ಉದ್ದವ್ ಠಾಕ್ರೆ ಸಾರಥ್ಯದ ಶಿವಸೇನಾ (ಯುಬಿಟಿ) ಒಳಗೊಂಡ ಮಹಾ ವಿಕಾಸ ಅಘಾಡಿ ಅಧಿಕಾರಕ್ಕೇರುವುದು ಖಚಿತ ಎಂದು ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ವಿಶ್ವಾಸ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಶಿವಶಂಕರಪ್ಪರಿಗೆ ಮುಂದುವರಿದ ಚಿಕಿತ್ಸೆ, ಕೆಲವೇ ದಿನಗಳಲ್ಲಿ ಡಿಸ್ಚಾರ್ಜ್​: ವದಂತಿ ಬಗ್ಗೆ ಪುತ್ರ ಆಕ್ರೋಶ

Spread the loveದಾವಣಗೆರೆ: ಹಿರಿಯ ಶಾಸಕ ಹಾಗೂ ಅಖಿಲ ಭಾರತೀಯ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಅವರ ಅನಾರೋಗ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ