Breaking News

ಪುರುಷರಿಗೆ ಸಾರಿಗೆ ಬಸ್ ಗಳಲ್ಲಿ ‘ಉಚಿತ ಪ್ರಯಾಣ’ ಪ್ರಸ್ತಾವನೆ ಸದ್ಯಕ್ಕೆ ಇಲ್ಲ : ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

Spread the love

ಹುಬ್ಬಳ್ಳಿ : ಮಕ್ಕಳ ದಿನಾಚರಣೆ ಹಿನ್ನೆಲೆಯಲ್ಲಿ ನಿನ್ನೆ ವಿಧಾನಸೌಧದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಮಕ್ಕಳ ಜೊತೆಗೆ ಸಂವಾದದಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ಒಬ್ಬ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಉತ್ತರಿಸಿ, ಪುರುಷರಿಗೂ ಕೂಡ ಶಕ್ತಿ ಯೋಜನೆ ಅಡಿಯಲ್ಲಿ ಸಾರಿಗೆ ಬಸವಗಳಲ್ಲಿ ಉಚಿತ ಪ್ರಯಾಣದ ಕುರಿತು ಸುಳಿವು ನೀಡಿದ್ದರು.

 

ಆದರೆ ಈ ಕುರಿತಾಗಿ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಮಾತನಾಡಿ, ಸಾರಿಗೆ ಬಸ್ ನಲ್ಲಿ ಪುರುಷರಿಗೆ ಉಚಿತ ಪ್ರಯಾಣ ಪ್ರಸ್ತಾವನೆ ಸದ್ಯಕ್ಕೆ ಇಲ್ಲ ಎ ದು ಸ್ಪಷ್ಟಪಡಿಸಿದರು. ಸದ್ಯ ಯೋಜನೆಯ ಅಡಿ ಮಹಿಳೆಯರಿಗೆ ಮಾತ್ರ ಉಚಿತ ಪ್ರಯಾಣಕ್ಕೆ ಅವಕಾಶವಿದೆ ಎಂದರು.

ಪುರುಷರಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸುವ ಪ್ರಸ್ತಾವನೆ ಸದ್ಯಕ್ಕೆ ಇಲ್ಲ. ನಿನ್ನೆ ನಡೆದ ಸಂವಾದದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಈ ವಿಷಯ ಹೇಳಿದ್ದಾರೆ. ಈ ಕುರಿತಂತೆ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದಾಗ ಕೇಳುತ್ತೇನೆ.ಆದರೆ ಪುರುಷರಿಗೆ ಉಚಿತ ಪ್ರಯಾಣದ ಬಗ್ಗೆ ಯಾವ ಪ್ರಸ್ತಾವನೆಯೂ ಇಲ್ಲ ಎಂದು ಹುಬ್ಬಳ್ಳಿಯಲ್ಲಿ ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದರು.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ