Breaking News

ಎರಡೂವರೆ ವರ್ಷದ ಮಗುವಿನ ಮೇಲೆ ಬೀದಿನಾಯಿ ದಾಳಿ

Spread the love

ತುಮಕೂರು: ಮನೆಯ ಮುಂದೆ ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿನ ಮೇಲೆ ಬೀದಿನಾಯಿ ದಾಳಿ ನಡೆಸಿದ್ದು, ಮಗುವಿನ ಕಣ್ಣು, ತಲೆಯ ಭಾಗಕ್ಕೆ ಕಚ್ಚಿ ಗಾಯಗೊಳಿಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರು ತಾಲೂಕಿನ ಹೆಗ್ಗೆರೆಯಲ್ಲಿ ಈ ಘಟನೆ ನಡೆದಿದೆ. ಹಲೀಜಾ ಖಾನಂ ನಾಯಿ ದಾಳಿಗೆ ಗಂಭೀರವಾಗಿ ಗಾಯಗೊಂಡಿರುವ ಮಗು.

ಗಾಯಾಳು ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೆಗ್ಗೆರೆ ಗ್ರಾಮಸ್ಥರು ಬೀದಿ ನಾಯಿ ಹಾವಳಿಗೆ ರೋಸಿ ಹೋಗಿದ್ದು, ನೂರಾರು ಬೀದಿ ನಾಯಿಗಳು ರಸ್ತೆಯಲ್ಲಿಯೇ ಒಡಾಡುತ್ತಿವೆ. ಮಕ್ಕಳು, ಹಿರಿಯರನ್ನು ಕಚ್ಚಿ ಗಾಯಗೊಳಿಸಿವೆ. ಆದರೂ ಸಂಬಂಧಪಟ್ಟ ಅಧಿಕಾರಿಗಳು ಬೀದಿನಾಯಿಗಳಿಗೆ ಕಡಿವಾಣ ಹಾಕುತ್ತಿಲ್ಲ. ಮನುಷ್ಯ ಜೀವಕ್ಕೆ ಬೆಲೆ ಇಲ್ಲವೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ