Breaking News

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Spread the love

ಬೆಳಗಾವಿ: ಚುನಾವಣೆ ಫಲಿತಾಂಶದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಬೆಳಗಾವಿಯಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ಆಪರೇಷನ್ ಕಮಲ ಮಾಡುವ ಪರಿಸ್ಥಿತಿ ಅಥವಾ ಅನಿವಾರ್ಯತೆ ಇಲ್ಲ.

ಕಾಂಗ್ರೆಸ್‌ದವರೇ ಅತಂತ್ರದಲ್ಲಿದ್ದಾರೆ. ನನ್ನನ್ನು ಮುಟ್ಟಿದರೆ ಕರ್ನಾಟಕದ ಜನರು ಸುಮ್ಮನೆ ಬಿಡುವುದಿಲ್ಲ ಎಂದು ಸಿದ್ದರಾಮಯ್ಯ ತಮ್ಮ ಪಕ್ಷದವರನ್ನು ಉದ್ದೇಶಿಸಿಯೇ ಹೇಳಿದ್ದಾರೆ. ಅವರು ಹೇಳಿರುವದು ಬಿಜೆಪಿಯವರಿಗೆ ಅಲ್ಲ. ಉಪಚುನಾವಣೆ ಫಲಿತಾಂಶದ ನಂತರ ಮುಖ್ಯಮಂತ್ರಿ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ. ಹೀಗಾಗಿ ಸಿದ್ದರಾಮಯ್ಯ ತಮ್ಮವರನ್ನು ಉದ್ದೇಶಿಸಿ ಈ ರೀತಿ ಹೇಳಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹೋರಾಟದಿಂದ ಬಂದವರು. ಆದರೆ ಮುಡಾ ಹಗರಣದಲ್ಲಿ ತಮ್ಮ ಪತ್ನಿಯ ಹೆಸರು ಬಂದ ನಂತರ ಮಾನಸಿಕವಾಗಿ ಗೊಂದಲದಲ್ಲಿದ್ದಾರೆ. ಮುಡಾ ಹಗರಣದ ನಂತರ ಮುಖ್ಯಮಂತ್ರಿ ಬದಲಾಗುತ್ತಾರೆ ಎಂದು ಅವರ ಪಕ್ಷದಲ್ಲೇ ಗುಸುಗುಸು ಅರಂಭವಾಗಿತ್ತು. ಈ ಆತಂಕ ಸಿದ್ದರಾಮಯ್ಯಗಿದೆ. ಅದೇ ಕಾರಣಕ್ಕೆ ಸಿದ್ದರಾಮಯ್ಯ ತಮ್ಮ ಪಕ್ಷದವರಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಕಡಾಡಿ ಹೇಳಿದರು.


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ