Breaking News

JOB ALERT : ‘KPTCL’ ನಲ್ಲಿ ‘ಪವರ್ ಮ್ಯಾನ್’ ಸೇರಿ 2975 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನ.20 ಲಾಸ್ಟ್ ಡೇಟ್!

Spread the love

ಬೆಂಗಳೂರು: ಕರ್ನಾಟಕ ಪವರ್ ಟ್ರಾನ್ಸ್ ಮಿಷನ್ ಕಾರ್ಪೊರೇಷನ್ ಲಿಮಿಟೆಡ್ ಅಂದರೆ ಕೆಪಿಟಿಸಿಎಲ್ ನಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಹತೆ ಮೇಲೆ ಉದ್ಯೋಗಕ್ಕೆ ಅರ್ಜಿ ಕರೆಯಲಾಗಿದೆ. ಬರೋಬ್ಬರಿ 2975 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭಗೊಂಡಿದ್ದು, ನೀವು ಎಸ್ ಎಸ್ ಎಲ್ ಸಿ ಪಾಸ್ ಆಗಿದ್ದರೇ ತಪ್ಪದೇ ಅರ್ಜಿ ಸಲ್ಲಿಸಿ.

 

ಈ ಕುರಿತಂತೆ ಕೆಪಿಟಿಸಿಎಲ್ ನಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 411 ಕಿರಿಯ ಸ್ಟೇಷನ್ ಪರಿಚಾರಕ ಮತ್ತು 81 ಕಿರಿಯ ಪವರ್ ಮ್ಯಾನ್ ಹುದ್ದೆಗಳಿಗೆ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ 2268 ಕಿರಿಯ ಪವರ್ ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಇಂದ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿರುವುದಾಗಿ ತಿಳಿಸಿದೆ.

ವಿದ್ಯಾರ್ಹತೆ – ಎಸ್‌ಎಸ್ ಎಲ್ ಸಿ ಅಥವಾ 10ನೇ ತರಗತಿಯ ಸಿಬಿಎಸ್‌ಇ, ಐಸಿಎಸ್‌ಇ ಪರೀಕ್ಷೆಯನ್ನು ಕರ್ನಾಟಕ ರಾಜ್ಯದ ವಿದ್ಯಾಸಂಸ್ಥೆಗಳಿಂದ ತೇರ್ಗಡೆ ಹೊಂದಿರುವಂತ ಅಭ್ಯರ್ಥಿಗಳು ಮಾತ್ರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು.

ಆಯ್ಕೆಯ ವಿಧಾನ- ಸಹನ ಶಕ್ತಿ ಪರೀಕ್ಷೆಯ ಕನಿಷ್ಠ ಮೂರು ಸ್ಪರ್ಧೆಗಳಲ್ಲಿ ಅರ್ಹತೆ ಹೊಂದಿರುವಂತ ಅಭ್ಯರ್ಥಿಗಳನ್ನು ಎಸ್ ಎಸ್ ಎಲ್ ಸಿ ಅಥವಾ 10ನೇ ತರಗತಿ ಪರೀಕ್ಷೆಯ ವಿದ್ಯಾರ್ಹತೆಯಲ್ಲಿ ಗಳಿಸಿರುವ ಶೇಕಡವಾರು ಅಂಕಗಳ ಜ್ಯೇಷ್ಠೆತೆ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು – ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ದಿನಾಂಕ 21-10-2024ರ ಆರಂಭ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20-11-2024 ಆಗಿರುತ್ತದೆ. ದಿನಾಂಕ 25-11-2024 ಶುಲ್ಕ ಪಾವತಿಗೆ ಕೊನೆಯ ದಿನವಾಗಿದೆ.

ಅರ್ಜಿ ಶುಲ್ಕ ವಿವರ- ಸಾಮಾನ್ಯ ವರ್ಗ, ಪ್ರವರ್ಗ-1, 2ಎ, 2ಬಿ, 3ಎ, 3ಬಿ ವರ್ಗದವರಿಗೆ ರೂ.614. ಎಸ್ಸಿ, ಎಸ್ಟಿ ವರ್ಗದವರಿಗೆ ರೂ.378. ವಿಕಲಚೇತನರಿಗೆ ಶುಲ್ಕ ಪಾವತಿಯಿಂದ ವಿನಾಯ್ತಿ ನೀಡಲಾಗಿರುತ್ತದೆ.

ಅರ್ಜಿ ಸಲ್ಲಿಸುವ ವಿಧಾನ – https://kptcl.karnataka.gov.in ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ