ಮೂಡಲಗಿ: ತಾಲ್ಲೂಕಿನ ಪಟಗುಂದ ಗ್ರಾಮ ಬಳಿಯಲ್ಲಿ ಶಾಲಾ ಬಸ್ ಪಲ್ಟಿಯಾಗಿದ್ದು ಬಸ್‌ನಲ್ಲಿದ್ದ 30ಕ್ಕೂ ಅಧಿಕ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಕೆಲವು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಶುಕ್ರವಾರ ಬೆಳಿಗ್ಗೆ ಜರುಗಿದೆ.
ಗಾಯಗೊಂಡಿರುವ ಮಕ್ಕಳಿಗೆ ಮೂಡಲಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಅವರ ಮನೆಗಳಿಗೆ ತಲುಪಿಸಿರುವ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ್ ಮನ್ನಿಕೇರಿ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

ಇಲ್ಲಿಯ ಸಿ.ಎನ್.ಮುಗಳಖೋಡ ಶಾಲೆಯ ಬಸ್ ಮಕ್ಕಳನ್ನು ಕರೆದುಕೊಂಡು ಶಾಲೆಗೆ ಬರುವಾಗ ಈ ಅವಘಡ ಸಂಭವಿಸಿದ್ದು, ಚಾಲಕನ ನಿರ್ಲಕ್ಷ್ಯತೆ ಇದಕ್ಕೆ ಕಾರಣವಾಗಿದೆ.
Laxmi News 24×7