Breaking News

ಕಾರು ಅಡ್ದಗಟ್ಟಿ ಲಕ್ಷಾಂತರ ರೂಪಾಯಿ ಹಣದೊಂದಿಗೆ ಕಾರಿನ ಸಮೇತ ಪರಾರಿಯಾದ ದುಷ್ಕರ್ಮಿಗಳು

Spread the love

ಬೆಳಗಾವಿ: ಕಾರು ಅಡ್ಡಗಟ್ಟಿ ನಿಲ್ಲಿಸಿ ಪಿಸ್ತೂಲ್ ತೋರಿಸಿ 75 ಲಕ್ಷ ಹಣದೊಂದಿಗೆ ಕಾರಿನ ಸಮೇತ ದರೋಡೆಕೋರರ ಗ್ಯಾಂಗ್ ಪರಾರಿಯಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹರಗಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಹಾರಾಷ್ಟ್ರದ ಕೊಲ್ಲಾಪುರದಿಂದ ಕೇರಳಕ್ಕೆ ಹೊರಟಿದ್ದ ಇನೋವಾ ಕಾರನ್ನು ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳ ತಂಡ, ಬಳಿಕ ಕಾರು ಅಡ್ಡಗಟ್ಟಿ ನಿಲ್ಲಿಸಿದೆ.

ಪಿಸ್ತೂಲು ತೋರಿಸಿ ಕಾರಿನಲ್ಲಿದ್ದವರನ್ನು ಕೆಳಗಿಳಿಸಿ ಕಾರಿನಲ್ಲಿದ್ದ 75 ಲಕ್ಷ ಹಣದ ಸಮೇತ ಎಸ್ಕೇಪ್ ಆಗಿದೆ.

ಸೂರಜ್ ವನಮಾನೆ ಎಂಬುವವರು ಕೊಲ್ಲಾಪುರದಲ್ಲಿ ಚಿನ್ನದ ವ್ಯಾಪಾರ ಮುಗಿಸಿಕೊಂಡು ಚಾಲಕನೊಂದಿಗೆ ಕಾರಿನಲ್ಲಿ ಕೇರಳಕ್ಕೆ ತೆರಳುತ್ತಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಘಟನೆ ನಡೆದಿದೆ.

ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ