Breaking News

ಮಹಾರಾಷ್ಟ್ರದಲ್ಲಿ ಮೋದಿಗೆ ಮತ್ತೊಮ್ಮೆ ಸವಾಲೆಸೆದ ಸಿದ್ದರಾಮಯ್ಯ

Spread the love

ಮುಂಬೈ, ನವೆಂಬರ್‌ 16: ಅಬಕಾರಿ ಇಲಾಖೆಯಲ್ಲಿ 700 ಕೋಟಿ ಲಂಚ ಪಡೆದು ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಚುನಾವಣೆ ನಡೆಸುತ್ತಿದೆ ಎನ್ನುವ ಹಸಿ ಹಸಿ ಸುಳ್ಳನ್ನು ಇದೇ ಮಹಾರಾಷ್ಟ್ರದಲ್ಲಿ ಮೋದಿ ಹೇಳಿದ್ದಾರೆ. ಮೋದಿಯವರೇ ನಾನು ನೀವು ಸುಳ್ಳು ಭಾಷಣ ಮಾಡಿದ ಮಹಾರಾಷ್ಟ್ರಕ್ಕೇ ಬಂದು ನಿಮಗೆ ನೇರ ಸವಾಲು ಹಕುತ್ತಿದ್ದೇನೆ.

ನಿಮ್ಮ ಭಾಷಣದ ಸುಳ್ಳನ್ನು ಸಾಬೀತು ಮಾಡಿದರೆ ನಾನು ಆ ಕ್ಷಣವೇ ರಾಜಕೀಯ ನಿವೃತ್ತಿ ಪಡೆಯಲು ಸಿದ್ದ. ಇಲ್ಲದಿದ್ದರೆ ನೀವು ರಾಜಕೀಯ ನಿವೃತ್ತಿ ಘೋಷಿಸುತ್ತೀರಾ ಎಂದು ಸವಾಲು ಹಾಕಿದರು.

ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಪಂಡರಪುರ ಮಂಗಳ್ ವೇಡಾ ದಲ್ಲಿ ಮಹಾರಾಷ್ಟ್ರ ರಾಜ್ಯ ಕಾಂಗ್ರೆಸ್ ಆಯೋಜಿಸಿದ್ದ ಸಾರ್ವಜನಿಕ ಸಭೆಯಲ್ಲಿ ಬೃಹತ್ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿ ಸಿದ್ದರಾಮಯ್ಯ, ಸ್ವಾತಂತ್ರ್ಯ ಭಾರತದಲ್ಲಿ ಮೋದಿಯಷ್ಟು ಸುಳ್ಳು ಹೇಳುವ ಪ್ರಧಾನಿ ಹಿಂದೆಂದೂ ಬಂದಿರಲಿಲ್ಲ. ಮುಂದೆಯೂ ಬರೋದಿಲ್ಲ. ನಿಮಗೆ ಭ್ರಷ್ಟಾಚಾರದ ವಿರುದ್ಧ ಮಾತನಾಡುವ ನೈತಿಕತೆ ಇಲ್ಲ. ಇದ್ದರೆ ನನ್ನ ಸವಾಲನ್ನು ಸ್ವೀಕರಿಸಿ ಎಂದು ಮೋದಿಯವರಿಗೆ ಕರೆ ನೀಡಿದರು.

ಆಪರೇಷನ್ ಕಮಲದ ಮೂಲಕ ಹಲವು ರಾಜ್ಯಗಳಲ್ಲಿ ಶಾಸಕರನ್ನು ಖರೀಧಿಸಿದರಲ್ಲಾ ಅದಕ್ಕೆಲ್ಲಾ ಅಷ್ಟು ಕೋಟಿ ಕೋಟಿ ಹಣ ಎಲ್ಲಿಂದ ಬಂತು ನಿಮಗೆ? ಮಹಾರಾಷ್ಟ್ರ ಜನತೆಗೆ ಉತ್ತರಿಸಿ ಎಂದು ಮತ್ತೊಂದು ಸವಾಲು ಎಸೆದರು. ಏಕನಾಥ್ ಶಿಂಧೆ ಮಹಾರಾಷ್ಟ್ರ ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬರಲಿಲ್ಲ. ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದರು. ಈ ಆಪರೇಷನ್ ಗೆ ಬಳಸಿದ ಹಣ ಯಾವುದು? ಭ್ರಷ್ಟಾಚಾರದ್ದು ಅಲ್ವಾ? ಆ ಹಣ ಎಲ್ಲಿಂದ ಬಂತು ಎಂದು ಮಹಾರಾಷ್ಟ್ರ ಜನರಿಗೆ ಹೇಳಬಲ್ಲಿರಾ ಎಂದು ಪ್ರಶ್ನಿಸಿದರು.


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ