Breaking News

ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Spread the love

ಹುಬ್ಬಳ್ಳಿ: ಹಳೇಹುಬ್ಬಳ್ಳಿ ಶರಾವತಿನಗರ ಬಳಿ ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು ಹಾಗೂ ಸಹಕರಿಸಿದ ಮೂವರನ್ನು ಹಳೇಹುಬ್ಬಳ್ಳಿ ಪೊಲೀಸರು ಶನಿವಾರ (ನ.16) ಬಂಧಿಸಿ, ಸ್ಕೂಟಿ ಮತ್ತು ಐದು ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಹಳೇಹುಬ್ಬಳ್ಳಿಯ ಅಯೋಧ್ಯಾನಗರ ನಿವಾಸಿಗಳಾದ ಶುಭಂ ತಡಸ, ಮೆಹಬೂಬ ಹಿತ್ತಲಮನಿ ಹಾಗೂ ಇವರಿಗೆ ಸಹಕರಿಸಿದ ಸಾಗರ ಸಾತಪುತೆ, ಶ್ರೀವತ್ಸವ ಬೆಂಡಿಗೇರಿ, ಸಚಿನ ನರೇಂದ್ರ ಬಂಧಿತರಾಧವರು.

 

ಎರಡು ದಿನಗಳ ಹಿಂದೆ ಬಾಲಕಿಯು ಶಾಲೆಯಿಂದ ಮನೆಗೆ ತೆರಳುವಾಗ ಸ್ಕೂಟಿಯಲ್ಲಿ ಹಿಂಬಾಲಿಸುತ್ತಾ ಬಂದ ಯುವಕರಿಬ್ಬರು ಚುಡಾಯಿಸಿದ್ದರು. ಈ ದೃಶ್ಯಾವಳಿಯು ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿತ್ತು. ಅದು ಸಾಮಾಜಿಕ ಜಾಲತಾಣಗಳಲ್ಲಿ ಹರದಾಡಿತ್ತು. ಬಾಲಕಿಯ ಪೋಷಕರು ಯುವಕರ ವಿರುದ್ಧ ಶುಕ್ರವಾರ (ನ.15) ಹಳೇಹುಬ್ಬಳ್ಳಿ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಿಸಿದ್ದರು.

ಠಾಣೆಯ ಇನ್ಸ್‌ಪೆಕ್ಟರ್ ಸುರೇಶ ಹಳ್ಳೂರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ ಕಾರ್ಯಾಚರಣೆ ನಡೆಸಲಾಗಿತ್ತು. ಪ್ರಕರಣ ದಾಖಲಾದ ಎರಡು ಗಂಟೆಯೊಳಗೆ ಯುವಕರನ್ನು ಬಂಧಿಸಲಾಗಿದೆ ಎಂದು‌ ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸೌರಶಕ್ತಿ ಬಲ

Spread the loveಹುಬ್ಬಳ್ಳಿ: ವಾಣಿಜ್ಯ ‌ನಗರಿ ಹುಬ್ಬಳ್ಳಿ ವಿಮಾನ ‌ನಿಲ್ದಾಣ ಅಂತಾರಾಷ್ಟ್ರೀಯ ಮಟ್ಟದ ವಿಮಾನ ನಿಲ್ದಾಣವಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ‌. ಇದರ ಭಾಗವಾಗಿ ಹುಬ್ಬಳ್ಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ