Breaking News

ಸರ್ಕಾರಕ್ಕೆ ಗ್ಯಾರಂಟಿಗಳು ಹೊರೆಯಾಗಿಲ್ಲ

Spread the love

 

ಬೆಂಗಳೂರು, ನವೆಂವರ್‌ 18: ರಾಜ್ಯದ ಗ್ಯಾರಂಟಿ ಯೋಜನೆಗಳು ರಾಜ್ಯ ಸರ್ಕಾರದ ಮೇಲೆ ಹೊರೆಯಾಗಿಲ್ಲ ಎಂಬ ಅಚ್ಚರಿಯ ಹೇಳಿಕೆಯನ್ನು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಗ್ಯಾರಂಟಿಗಳಿಂದ ರಾಜ್ಯ ದಿವಾಳಿಯಾಗಿದೆ ಎಂದು ನಾನು ಹೇಳುವುದಿಲ್ಲ, ಬದಲಿಗೆ ಆರ್ಥಿಕ ಅದಕ್ಷತೆ, ಅಸಮರ್ಪಕ ನಿರ್ವಹಣೆಯಿಂದ ಖಜಾನೆ ಬರಿದಾಗಿ ರಾಜ್ಯವು ಸಾಲದ ದವಡೆಗೆ ಸಿಲುಕಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪಿಸಿದರು.

 

ರಾಜ್ಯದಲ್ಲಿ ಅಪಾರ ಪ್ರಮಾಣದಲ್ಲಿ ತೆರಿಗೆ ಸಂಗ್ರಹ ಆಗುತ್ತಿದೆ. ಅಲ್ಲದೆ ಈ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ನಿರಂತರವಾಗಿ ತೆರಿಗೆ, ಶುಲ್ಕ ಹೆಚ್ಚಿಸುತ್ತಾ ಬಂದಿದೆ. ಗ್ಯಾರಂಟಿಗಳಿಗೆ ವರ್ಷಕ್ಕೆ ₹52,000 ರಿಂದ ₹60,000 ಕೋಟಿ ಆಗುತ್ತದೆ ಎಂದು ಸರಕಾರ ಹೇಳುತ್ತಿದೆ. ಆದರೆ, ಸಂಗ್ರಹ ಆಗುತ್ತಿರುವ ಜನರ ತೆರಿಗೆ ದುಡ್ಡು ಎಲ್ಲಿ ಹೋಗುತ್ತಿದೆ? ಇದಕ್ಕೆ ಉತ್ತರ ಕೊಡಬೇಕಲ್ಲವೇ? ಎಂದು ಹೆಚ್‌ ಡಿ ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

 

 


Spread the love

About Laxminews 24x7

Check Also

ಕನಿಷ್ಠ ವೇತನ ಹೆಚ್ಚುವರಿ ಆದೇಶ ವಾಪಸ್ಸು ಪಡೆಯಲು ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ

Spread the loveಬೆಳಗಾವಿ : ರಾಜ್ಯ ಸರ್ಕಾರದ ಕನಿಷ್ಠ ವೇತನ ಹೆಚ್ಚಳದ ತಿದ್ದುಪಡಿ ಆದೇಶವನ್ನು ವಿರೋಧಿಸಿ ನಗರದಲ್ಲಿ  ವಿವಿಧ ವ್ಯಾಪಾರ ಮತ್ತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ