Breaking News

ಮೈಸೂರಿನಲ್ಲಿ ನೇಣು ಬಿಗಿದುಕೊಂಡು `ಬೆಮೆಲ್ ಅಧಿಕಾರಿ’ ಆತ್ಮಹತ್ಯೆ!

Spread the love

ಮೈಸೂರು: ಮೈಸೂರಿನಲ್ಲಿ ಬೆಮೆಲ್ ಅಧಿಕಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಮೈಸೂರಿನ ದಟ್ಟಗಳ್ಳಿ ಹೊರ ವರ್ತುಲ ರಸ್ತೆಯ ಕೆಇಬಿ ಸಮುದಾಯಭವನದ ವಾಚ್ ಮನ್ ಶೆಡ್ ನಲ್ಲಿ ಬೆಮೆಲ್ ಅಧಿಕಾರಿ ಎಲ್. ಮೋಹನ್ ರಾವ್(54) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

 

ಮೋಹನ್ ರಾವ್ ಬೆಮಲ್ ಡಿಜಿಎಂ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಭಾನುವಾರ ಕರ್ತವ್ಯಕ್ಕೆ ತೆರಳುವುದಾಗಿ ಮನೆಯಿಂದ ಹೊರಗೆ ಹೋಗಿದ್ದಾರೆ. ಮಧ್ಯಾಹ್ನದವರೆಗೂ ಅವರು ಕುಟುಂಬದವರೊಂದಿಗೆ ಫೋನ್ ನಲ್ಲಿ ಅವರು ಮಾತನಾಡಿದ್ದು, ನಂತರ ಅವರ ಮೊಬೈಲ್ ಸ್ವಿಚ್ಡ್ ಆಫ್ ಆಗಿತ್ತು. ಬಳಿಕ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ.. ಕೆಲಸ ಒತ್ತಡದಿಂದಾಗಿ ತಂದೆ ಮೋಹನ್ ರಾವ್ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೃತರ ಪುತ್ರಿ ದೂರು ನೀಡಿದ್ದಾರೆ.


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ