Breaking News

ಬೆಳಗಾವಿಗೆ ಬೇಕು ಇನ್ನೊಂದು ಸಚಿವ ಸ್ಥಾನ: ಆಸಿಫ್‌ ಸೇಠ್‌

Spread the love

ಬೆಳಗಾವಿ: ‘ಬೆಳಗಾವಿ ಜಿಲ್ಲೆ ಅತ್ಯಂತ ದೊಡ್ಡದು. ಕನಿಷ್ಠ ಇನ್ನೊಂದು ಸಚಿವ ಸ್ಥಾನ ಕೊಡಬೇಕು. ಇಲ್ಲದಿದ್ದರೆ, ಜಿಲ್ಲೆಗೆ ಅನ್ಯಾಯ ಮಾಡಿದಂತಾಗುತ್ತದೆ’ ಎಂದು ಶಾಸಕ ಆಸಿಫ್‌ ಸೇಠ್‌ ಅಸಮಾಧಾನ ವ್ಯಕ್ತಪಡಿಸಿದರು.

‘ಬೆಂಗಳೂರು ಮೊದಲನೇ ಮತ್ತು ಬೆಳಗಾವಿ ಎರಡನೇ ಅತಿ ದೊಡ್ಡ ಜಿಲ್ಲೆ.

ಬೆಂಗಳೂರಿಗೆ ಎಷ್ಟು ಸಚಿವ ಸ್ಥಾನ ನೀಡಿದ್ದೀರಿ, ಬೆಳಗಾವಿಗೆ ಎಷ್ಟು ನೀಡಿದ್ದೀರಿ ಯೋಚಿಸಿ. ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ. ನನ್ನ ಸಮುದಾಯ ನನ್ನನ್ನೂ ಪ್ರಶ್ನಿಸುತ್ತಿದೆ. ಉತ್ತರ ಕರ್ನಾಟಕದಲ್ಲಿ ಏಕೆ ಅಲ್ಪಸಂಖ್ಯಾತರಿಗೆ ಸಚಿವ ಸ್ಥಾನ ನೀಡಿಲ್ಲ. ಏಕೆ ಅನ್ಯಾಯ ಮಾಡಲಾಗಿದೆ ಎಂದು ಪ್ರಶ್ನೆ ಮಾಡುತ್ತೇನೆ’ ಎಂದು ಅವರು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.

‘ಕಾಂಗ್ರೆಸ್‌ನ ಕೆಲ ಶಾಸಕರಿಗೆ ಬಿಜೆಪಿ ಮುಖಂಡರು ₹100 ಕೋಟಿ ಆಮಿಷ ಒಡ್ಡಿದ್ದಾರೆ. ನನ್ನನ್ನು ಯಾರೂ ಸಂಪರ್ಕಿಸಿಲ್ಲ. 135 ಶಾಸಕರೆಲ್ಲ ಒಟ್ಟಾಗಿದ್ದೇವೆ. ಯಾರೂ ಪಕ್ಷ ಬಿಟ್ಟು ಹೋಗುವುದಿಲ್ಲ. ನಾನಂತೂ ಸಾವಿರ ಕೋಟಿ ಕೊಟ್ಟರೂ ಬಿಜೆಪಿಗೆ ಹೋಗುವುದಿಲ್ಲ’ ಎಂದರು.

’50 ಜನರಿಗೆ ತಲಾ ₹100 ಕೋಟಿ ಕೊಡುವ ವಿಚಾರ ಬಿಜೆಪಿಯವರು ಮಾಡಿರಬಹುದು. ಅದಕ್ಕೆ ₹5,000 ಕೋಟಿ ಬೇಕು. ಇಷ್ಟೊಂದು ಹಣ ಎಲ್ಲಿಂದ ತಂದರು ಎಂಬುದು ತನಿಖೆಯಾಗಬೇಕು’ ಎಂದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ