Breaking News

ಮೀನುಗಾರಿಕೆಗೆ ಹೋದಾಗ ನೀರುಪಾಲು: ಇಬ್ಬರು ಮಕ್ಕಳ ಮೃತದೇಹ ಪತ್ತೆ; ತಂದೆಗಾಗಿ ಶೋಧ

Spread the love

ಮಕನಮರಡಿ(ಬೆಳಗಾವಿ ಜಿಲ್ಲೆ): ಸಮೀಪದ ಬೆನಕನಹೊಳಿ ಬಳಿ ಘಟಪ್ರಭಾ ನದಿ ಹಿನ್ನೀರಿನ ಪ್ರದೇಶದಲ್ಲಿ ತಂದೆಯೊಂದಿಗೆ ಮೀನುಗಾರಿಕೆಗೆ ಹೋದಾಗ ನೀರುಪಾಲಾಗಿದ್ದ ಇಬ್ಬರು ಮಕ್ಕಳ ಮೃತದೇಹ ಸೋಮವಾರ ಸಂಜೆ ಪತ್ತೆಯಾಗಿವೆ.

ಬೆನಕನಹೊಳಿಯ ರಮೇಶ ಅಂಬಲಿ(15), ಯಲ್ಲಪ್ಪ ಅಂಬಲಿ(13) ಮೃತರು.

ಅವರ ತಂದೆ ಲಕ್ಷ್ಮಣ ಅಂಬಲಿ(45) ಪತ್ತೆಗಾಗಿ ಅಗ್ನಿಶಾಮಕ ದಳ ತಂಡ ಹಾಗೂ ಪೊಲೀಸರಿಂದ ಕಾರ್ಯಾಚರಣೆ ಮುಂದುವರಿದಿದೆ.

‘ಲಕ್ಷ್ಮಣ ಅವರು ಘಟಪ್ರಭಾ ನದಿ ಸೇತುವೆ ಮೇಲೆ ಭಾನುವಾರ ರಾತ್ರಿ ಬೈಕ್‌ ನಿಲ್ಲಿಸಿ ತಮ್ಮ ಇಬ್ಬರು ಮಕ್ಕಳೊಂದಿಗೆ ಮೀನುಗಾರಿಕೆಗಾಗಿ ನದಿ‌ಗೆ ಇಳಿದಿದ್ದರು. ಆದರೆ, ಸೋಮವಾರ ಬೆಳಿಗ್ಗೆಯ ವರೆಗೂ ಮನೆಗೆ ಬಂದಿರಲಿಲ್ಲ. ಊರಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮ ವೊಂದರಲ್ಲಿ ಭಾಗಿಯಾಗಿರಬಹುದು ಎಂದು ಕುಟುಂಬಸ್ಥರು ತಿಳಿಸಿದ್ದರು. ಅಲ್ಲಿ ವಿಚಾರಿಸಿದಾಗ ಸುಳಿವು ಸಿಗಲಿಲ್ಲ. ಆಗ ಈ ಅವಘಡ ನಡೆದಿರುವುದು ಗೊತ್ತಾಗಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಸುದ್ದಿಗಾರರಿಗೆ ತಿಳಿಸಿದರು.

‘ಕುಟುಂಬದ ಸದಸ್ಯರಿಗೆ ಸೂಕ್ತ ಪರಿಹಾರ ನೀಡಲಾಗುವುದು’ ಎಂದು ಮೀನುಗಾರಿಕೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ