Breaking News

ಹೇರ್ ಡ್ರೈಯರ್’ ಸ್ಪೋಟಗೊಂಡು ಮಹಿಳೆಯ ಮುಂಗೈ. ಬೆರಳು ಕಟ್!

Spread the love

ಬಾಗಲಕೋಟೆ : ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.

ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ಹೇರ್ ಡ್ರೈರ್ ಸ್ಪೋಟಗೊಂಡು ಮಹಿಳೆಯ 2 ಕೈಗಳು ಛಿದ್ರವಾಗಿರುವ ಘಟನೆ ನಡೆದಿದೆ. ಮಹಿಳೆಯೊಬ್ಬರು ಹೇರ್ ಡ್ರೈಯರ್ ಬಳಸುವಾಗ ಇದ್ದಕ್ಕಿದ್ದಂತೆ ಬ್ಲಾಸ್ಟ್ ಆಗಿದೆ.

ಪರಿಣಾಮ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಸದ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಕೋರಿಯರ್ ಓಪನ್ ಮಾಡಿ ಹೇರ್ ಡ್ರೈಯರ್ ಸ್ವೀಚ್ ಆನ್ ಮಾಡಿದ ತಕ್ಷಣ ಬ್ಲಾಸ್ಟ್ ಆಗಿದ್ದು, ಇಳಕಲ್ ನಗರದ ಬಸಮ್ಮ ಎಂಬ ಮಹಿಳೆಯ ಎರಡೂ ಕೈಗಳು ಛಿದ್ರವಾಗಿದೆ. ಸದ್ಯ ಬಸಮ್ಮಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಳಕಲ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ