ಬೆಂಗಳೂರು, -ರಾಜ್ಯ ವಿಧಾನಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನ ಡಿ.9ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಆರಂಭವಾಗಲಿದೆ. ಪ್ರತಿ ವರ್ಷದಂತೆ ಈ ಬಾರಿಯು ಸುವರ್ಣ ವಿಧಾನಸೌಧದಲ್ಲಿ ಹತ್ತು ದಿನಗಳ ಕಾಲ ಅಧಿವೇಶನ ನಡೆಯಲಿದೆ.
ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿ, ದಿನಾಂಕ ನಿರ್ಧರಿಸುವ ಅಧಿಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಲಾಗಿತ್ತು. ಬೆಳಗಾವಿಯಲ್ಲಿ ವಿಧಾನ ಮಂಡಲದ ಅಧಿವೇಶನ ನಡೆಸುವ ಸಂಪುಟ ಸಭೆಯ ತೀರ್ಮಾನಕ್ಕೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಅನುಮೋದನೆ ನೀಡಿದ್ದಾರೆ.
ಸುವರ್ಣ ವಿಧಾನಸೌಧದಲ್ಲಿ ಡಿ.9ರಂದು ಬೆಳಿಗ್ಗೆ 11ಗಂಟೆಗೆ ವಿಧಾಸಭೆ ಮತ್ತು ವಿಧಾನ ಪರಿಷತ್ತಿನ ಅಧಿವೇಶನಗಳು ಸಮಾವೇಶಗೊಳ್ಳುವಂತೆ ರಾಜ್ಯಪಾಲರು ಕರೆದಿದ್ದಾರೆ. ಈ ಸಂಬಂಧ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಮೊದಲ ದಿನ ಇತ್ತೀಚೆಗೆ ಅಗಲಿದ ಗಣ್ಯರಿಗೆ ಶ್ರದ್ಧಾಂಜಲಿ ಸಲ್ಲಿಕೆಯಾಗಲಿದೆ.
Laxmi News 24×7