Breaking News

ರೈತರು ಬೆಳೆದ ಭತ್ತಕ್ಕೆ 3 ಸಾವಿರ ರೂ. ಬೆಂಬಲ ಬೆಲೆ ಘೋಷಣೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸವಂತೆ ಆಗ್ರಹ

Spread the love

ರೈತರು ಬೆಳೆದ ಭತ್ತಕ್ಕೆ 3 ಸಾವಿರ ರೂ. ಬೆಂಬಲ ಬೆಲೆ ಘೋಷಣೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸವಂತೆ ಆಗ್ರಹಿಸಿ ಗುರುವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಇಂದು ಬೆಳಗಾವಿ ಜಿಲ್ಲಾಧಿಕಾರಿ ಕಾರ್ಯಾಲಯಕ್ಕೆ ಆಗಮಿಸಿದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಸದಸ್ಯರು ಜಿಲ್ಲಾಧಿಕಾರಿಗಳಿಗೆ ಮನವಿಯನ್ನ ಸಲ್ಲಿಸಿದರು.

ಮುಂಗಾರು ಹಂಗಾಮಿನಲ್ಲಿ ಸತತವಾಗಿ ಬಂದ ಮಳೆಗೆ ಹಾನಿಯಾದ ಆಲೂಗಡ್ಡೆ ಹಾಗೂ ಇನ್ನಿತರ ಬೆಳೆಗಳ ನಷ್ಟಕ್ಕೆ ಜಿಲ್ಲಾಡಳಿತ ತತಕ್ಷಣ ಪರಿಹಾರ ನೀಡಬೇಕು.
ಈಗಾಗಲೇ ಆಲೂಗಡ್ಡೆ ಬೆಳೆ ನಷ್ಟವಾಗಿರುವ ಕುರಿತು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಗಿದೆ. ಜಿಲ್ಲಾಡಳಿತ ಬೆಳೆ ಹಾನಿ ಸಮೀಕ್ಷೆ ನಡೆಸಿ ರೈತರಿಗೆ ಪರಿಹಾರ ಕೊಡಬೇಕೆಂದು ಒತ್ತಾಯಿಸಿದರು.

ಈ ವೇಳೆ ಅಪ್ಪಾಸಾಹೇಬ ದೇಸಾಯಿ, ಮಾರುತಿ ಕಡೆಮನಿ, ಸುಭಾಸ ಧಾಯಗೊಂಡೆ, ರಾಮನಗೌಡ ಪಾಟೀಲ್, ಚಂದ್ರು ರಾಜಾಯಿ, ರಾಜು ಕಾಗಣಿಕರ, ನಾಮದೇವ ದುಡಮ, ಫಕೀರಾ ಸದಾವರ ಸೇರಿದಂತೆ ಇನ್ನಿತರರು ಭಾಗಿಯಾಗಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ