Breaking News

ಸಮರ್ಪಕ ವಸತಿ, ಸಾರಿಗೆ, ಊಟೋಪಹಾರ ವ್ಯವಸ್ಘೆ ಕಲ್ಪಿಸಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್‌ ಸೂಚನೆ…!!

Spread the love

ಬೆಳಗಾವಿ, ನ.20 : ಪ್ರಸಕ್ತ ಸಾಲಿನ ವಿಧಾನಮಂಡಳ ಚಳಿಗಾಲ ಅಧಿವೇಶನ ಡಿ.9 ರಿಂದ ನಡೆಯಲಿದೆ. ಅಧಿವೇಶನ ಸಂದರ್ಭದಲ್ಲಿ ಸಮರ್ಪಕ ವಸತಿ, ಸಾರಿಗೆ, ಊಟೋಪಹಾರ ವ್ಯವಸ್ಘೆ ಕಲ್ಪಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ‌ ಕಚೇರಿ ಸಭಾಂಗಣದಲ್ಲಿ ಬುಧವಾರ (ನ.20) ಜರುಗಿದ ವಿಧಾನಮಂಡಳ ಚಳಿಗಾಲ ಅಧಿವೇಶನ-2024 ರ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈ ಬಾರಿಯ ಚಳಿಗಾಲದ ಅಧಿವೇಶನ ಸಿದ್ಧತೆಗೆ ಕಡಿಮೆ ಸಮಯಾವಕಾಶವಿದ್ದು, ಅಧಿವೇಶನ ಯಶಸ್ವಿಗಾಗಿ ಅಧಿಕಾರಿಗಳು, ತಮ್ಮ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದು ಹೇಳಿದರು.

ಅಧಿವೇಶನದ ಯಶಸ್ವಿಗಾಗಿ ಈಗಾಗಲೇ ವಸತಿ, ಆಹಾರ, ಸಾರಿಗೆ, ಆರೋಗ್ಯ, ದೂರು ನಿರ್ವಹಣಾ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಎಲ್ಲ ಸಮಿತಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸುವ ಮೂಲಕ ಯಾವುದೇ ಲೋಪದೋಷ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.

ಅಧಿವೇಶನಕ್ಕೆ ಆಗಮಿಸುವ ಸಚಿವರು, ಹಿರಿಯ ಅಧಿಕಾರಿಗಳು, ಭದ್ರತಾ ಸಿಬ್ಬಂದಿ, ವಾಹನ ಚಾಲಕರರುಗಳಿಗೆ ಸೂಕ್ತ ವಸತಿ, ಊಟ ಹಾಗೂ ಸಾರಿಗೆ ವ್ಯವಸ್ಥೆಯನ್ನು ಒದಗಿಸಬೇಕು.

ಅಧಿವೇಶನಕ್ಕಾಗಿ ಆಗಮಿಸುವ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು, ಸಚಿವರುಗಳಿಗೆ ಶಿಷ್ಟಾಚಾರದಲ್ಲಿ ಯಾವುದೇ ಲೋಪವಾಗದಂತೆ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ನಿಗಾವಹಿಸಬೇಕು.

ಅಧಿವೇಶನಕ್ಕೆ ಆಗಮಿಸುವ ಗಣ್ಯರುಗಳಿಗೆ ಸೂಕ್ತ ವಸತಿ ವ್ಯವಸ್ಥೆ ಒದಗಿಸಬೇಕು.‌ ಈ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ವಸತಿಗಾಗಿ ಗುರುತಿಸಲಾದ ಹೊಟೇಲ್ ಗಳನ್ನು ಪರಿಶೀಲಿಸಿ, ಅವುಗಳ ಮಾಲಿಕರೊಂದಿಗೆ ಚರ್ಚಿಸಿ ಕೊಠಡಿಗಳನ್ನು ಕಾಯ್ದಿರಿಸಲು ತಿಳಿಸಿದರು.

ಅಧಿವೇಶನದ ಸಂದರ್ಭದಲ್ಲಿ ಸುವರ್ಣ ಸೌಧದಲ್ಲಿ ಅಂತರ್ಜಾಲ ಸಂಪರ್ಕದಲ್ಲಿ ಯಾವುದೇ ಅಡೆತಡೆಗಳು ಆಗದಂತೆ ಅಗತ್ಯ ಕ್ರಮಗಳನ್ನು ಮುಂಚಿತವಾಗಿಯೇ ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ರೋಷನ್ ತಿಳಿಸಿದರು.


Spread the love

About Laxminews 24x7

Check Also

ಫಿನಾಯಿಲ್ ಮಾರಾಟ ಮಾಡುತ್ತ ಚಿನ್ನದಂಗಡಿ ದೋಚಿದ್ದ ರಾಜಸ್ಥಾನಿ ಗ್ಯಾಂಗ್

Spread the loveಬೆಂಗಳೂರು : ಫಿನಾಯಿಲ್ ಸರಬರಾಜು ಮಾಡುತ್ತ ಚಿನ್ನದಂಗಡಿ ದೋಚಿದ್ದ ಐವರು ಆರೋಪಿಗಳನ್ನ ಕೆ. ಆರ್. ಪುರಂ ಠಾಣೆ ಪೊಲೀಸರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ