ಧಾರವಾಡ ನಗರದಿಂದ ಸುಮಾರು 40 ಕಿ.ಮೀ. ಅಂತರದಲ್ಲಿರುವ ಸವದತ್ತಿ ತಾಲೂಕು ಉಗರಗೋಳ ಗ್ರಾಮದ ಶ್ರೀಗುರು ಶಿವಪ್ಪಯ್ಯ ಶಿವಯೋಗಿಗಳವರ ಮಠದ ವಾರ್ಷಿಕ ಜಾತ್ರಾ ಮಹೋತ್ಸವ ಸೋಮವಾರ (ನ.25 ರಂದು) ಜರುಗಲಿದೆ.
ಅಂದು ಪ್ರಾತಃಕಾಲದಲ್ಲಿ ಶ್ರೀಗುರು ಶಿವಪ್ಪಯ್ಯ ಶಿವಯೋಗಳವರ ಕರ್ತೃ ಗದ್ದುಗೆಗೆ ಏಕಾದಶ ಮಹಾರುದ್ರಾಭಿಷೇಕ, ನೂರೊಂದು ಬಿಲ್ವಾರ್ಚನೆ, ಪುಷ್ಪಾಲಂಕಾರದ ವಿಶೇಷ ಪೂಜೆ ಜರುಗುವುದು. ನಂತರ ಮುಂಜಾನೆ 9 ಗಂಟೆಗೆ ಶ್ರೀಮಠದಿಂದ ಶ್ರೀಗುರು ಶಿವಪ್ಪಯ್ಯ ಶಿವಯೋಗಿಗಳ ಭಾವಚಿತ್ರ ಹಾಗೂ ಪಲ್ಲಕ್ಕಿ ಉತ್ಸವವು ನಡೆಯಲಿದ್ದು, ನಂತರ ಮಹಾಪ್ರಸಾದದ ದಾಸೋಹ ಹಮ್ಮಿಕೊಳ್ಳಲಾಗಿದೆ.
Laxmi News 24×7