Breaking News

ಜೆಡಿಎಸ್ ಅಂತಿಮ ದಿನಗಳನ್ನು ಎಣಿಸುತ್ತಾ ಇದೆ: ಗೆಲುವಿನ ಬಳಿಕ ಯೋಗೇಶ್ವರ್ ಮಾತು

Spread the love

ಬೆಂಗಳೂರು, ನವೆಂಬರ್ 23: ಚನ್ನಪಟ್ಟಣ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ ಗೆಲುವು ದಾಖಲಿಸಿದ್ದಾರೆ. ಅತ್ತ ಜೆಡಿಎಸ್​​ನ ನಿಖಿಲ್ ಕುಮಾರಸ್ವಾಮಿಗೆ ಹ್ಯಾಟ್ರಿಕ್ ಸೋಲಾಗಿದೆ. ಇದರ ಬೆನ್ನಲ್ಲೇ ಸಿಪಿ ಯೋಗೇಶ್ವರ್ ಚನ್ನಪಟ್ಟಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ಮತದಾರರಿಗೆ ಧನ್ಯವಾದ ಸಮರ್ಪಿಸಿದ್ದಾರೆ.

ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಹಾಗೂ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರ ಪ್ರತಿಷ್ಠೆಗೆ ಅವರ ಮಗ ನಿಖಿಲ್ ಬಲಿಯಾಗಿದ್ದಾರೆ. ಅವರಿಬ್ಬರೂ ತಮ್ಮ ಪ್ರತಿಷ್ಠೆಗೆ ಮಗನನ್ನೇ ಬಲಿಕೊಟ್ಟಿದ್ದಾರೆ ಎಂದು ಯೋಗೇಶ್ವರ್ ಹೇಳಿದ್ದಾರೆ. ಕುಮಾರಸ್ವಾಮಿ ಮನಸು ಮಾಡಿದ್ದರೆ ಮಗನನ್ನು ಮಂಡ್ಯದಲ್ಲಿ ಲೋಕಸಭೆ ಚುನಾವಣೆಗೆ ನಿಲ್ಲಿಸಿ ಗೆಲ್ಲಿಸಬಹುದಿತ್ತು. ಆದರೆ, ಕೇಂದ್ರ ಸಚಿವರಾಗುವ ತವಕದಿಂದ ತಾವೇ ಅಲ್ಲಿ ಸ್ಪರ್ಧಿಸಿದರು. ಮಗನನ್ನು ಬಲಿಕೊಟ್ಟರು ಎಂದು ಯೋಗೇಶ್ವರ್ ಟೀಕಿಸಿದರು.

ದೇವೇಗೌಡರು ದೈತ್ಯ ಶಕ್ತಿ ಎಂದು ಬಹಳ ಹಿಂದಿನಿಂದಲೂ ಹೇಳುತ್ತಾ ಬಂದಿದ್ದೇನೆ. ಅದು ಸತ್ಯ. ಆದರೆ, ಅವರಿಗೆ ವಯಸ್ಸಾಗಿದೆ. ಈ ಕಾರಣದಿಂದ ಅವರನ್ನು ಜನ ಚುನಾವಣೆಯಲ್ಲಿ ತಿರಸ್ಕರಿಸಿದ್ದಾರೆ. ಹೀಗಾಗಿ ಅವರಿಗೆ ವಿಶ್ರಾಂತ ಜೀವನ ನಡೆಸಲು ಇದು ಸೂಕ್ತ ಕಾಲ. ಈ ಚುನಾವಣೆ ಫಲಿತಾಂಶ ಜೆಡಿಎಸ್​​ ಕೊನೆಯ ಕ್ಷಣಗಳನ್ನು ಎಣಿಸುತ್ತಿದೆ ಎಂಬುದರ ಸಂಕೇತ ಎಂದು ಯೋಗೇಶ್ವರ್ ಹೇಳಿದರು


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ