Breaking News

ಗ್ಯಾರಂಟಿ, ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿ ಜನರು ಮತ ನೀಡಿದ್ದಾರೆ: ಡಿಕೆ ಶಿವಕುಮಾರ್

Spread the love

ನವೆಂಬರ್​ 23: ಉಪ ಚುನಾವಣೆ ಫಲಿತಾಂಶ (Karnataka By Poll Result) 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಿದೆ. ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜನರು ಮತ ನೀಡಿದ್ದಾರೆ. ಗ್ಯಾರಂಟಿ ಮತ್ತು ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿ ಜನರು ಮತ ನೀಡಿದ್ದಾರೆ. ಸಮೀಕ್ಷೆಗಳು ಸುಳ್ಳಾಗುತ್ತವೆ ಅಂತ ನಾನು ನಿನ್ನೆ ಸಂಜೆಯೇ ಹೇಳಿದ್ದೆ. ನಾವು ಮಾಡುವ ಸಮೀಕ್ಷೆಯೇ ಬೇರೆ ಅಂತ‌ ಹೇಳಿದ್ದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಹೇಳಿದರು.

ಬೆಂಗಳೂರಿನ ಕೆಪಿಸಿಸಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹೆಚ್​ಡಿ ಕುಮಾರಸ್ವಾಮಿ ಅವರು ಹೆಚ್​ಡಿಕೆ ಮಂಡ್ಯ ಕ್ಷೇತ್ರದ ಸಂಸದರಾಗಿದ್ದಾರೆ. ಮತ್ತು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದರು. ಆ ಕ್ಷೇತ್ರದಲ್ಲಿ ಬಿಟ್ಟು ಹೋದ ಕುರುಹುಗಳಿಗೆ ಜನ ಉತ್ತರ ನೀಡಿದ್ದಾರೆ. ಶಿಗ್ಗಾಂವಿ, ಸಂಡೂರು ಕ್ಷೇತ್ರಗಳಲ್ಲೂ ನಾವು ಗೆದ್ದಿದ್ದೇವೆ ಎಂದು ಸಂತಸ ವ್ಯಕ್ತಪಡಿಸಿದರು.

ಶಿಗ್ಗಾಂವಿಯಲ್ಲಿ ಭರತ್ ಸೋಲು ಅನ್ನೋದು ಹೇಳಲ್ಲ. ಅಲ್ಲಿ ಈ ಹಿಂದೆ ನಮ್ಮ ಅಭ್ಯರ್ಥಿ ಸೋತಿದ್ದರು. ಈಗ ನಮ್ಮ ಅಭ್ಯರ್ಥಿ ಗೆದ್ದಿದ್ದಾರೆ. ಸಂಡೂರಲ್ಲಿನಲ್ಲೂ ನಾವು ಗೆದ್ದಿದ್ದೇವೆ. ಈ ಮೂರು ಚುನಾವಣೆ ನಮ್ಮ ಗ್ಯಾರಂಟಿ ಮತ್ತು ಅಭಿವೃದ್ಧಿಗೆ ಕೈಗನ್ನಡಿಯಾಗಿದೆ ಎಂದು ಹೇಳಿದರು.


Spread the love

About Laxminews 24x7

Check Also

ಫಿನಾಯಿಲ್ ಮಾರಾಟ ಮಾಡುತ್ತ ಚಿನ್ನದಂಗಡಿ ದೋಚಿದ್ದ ರಾಜಸ್ಥಾನಿ ಗ್ಯಾಂಗ್

Spread the loveಬೆಂಗಳೂರು : ಫಿನಾಯಿಲ್ ಸರಬರಾಜು ಮಾಡುತ್ತ ಚಿನ್ನದಂಗಡಿ ದೋಚಿದ್ದ ಐವರು ಆರೋಪಿಗಳನ್ನ ಕೆ. ಆರ್. ಪುರಂ ಠಾಣೆ ಪೊಲೀಸರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ