Breaking News

ಕೋವಿಡ್ -19ರಿಂದ ರಕ್ಷಣೆ ಪಡೆಯಲು ಸ್ವಯಂ ಪ್ರೇರಣೆಯಿಂದ ಸುರಕ್ಷತಾ ಕ್ರಮಗಳನ್ನು ಅನುಸರಿಸುವುದೊಂದೇ ದಾರಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

Spread the love

ಬೆಳಗಾವಿ: ಇಡೀ ಜಗತ್ತನ್ನೇ ತಲ್ಲಣಗೊಳಿಸಿರುವ ಕೋವಿಡ್ -19ರಿಂದ ರಕ್ಷಣೆ ಪಡೆಯಲು ಸ್ವಯಂ ಪ್ರೇರಣೆಯಿಂದ ಸುರಕ್ಷತಾ ಕ್ರಮಗಳನ್ನು ಅನುಸರಿಸುವುದೊಂದೇ ದಾರಿ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿರ್ದೇಶಕ ಶೀನಪ್ಪ ಎಂ. ಹೇಳಿದರು.

ಖಾಸಬಾಗದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜ್ಞಾನವಿಕಾಸ ಕಾರ್ಯಕ್ರಮದಡಿ ಮುಚ್ಚಂಡಿಯ ಲಕ್ಷ್ಮೀದೇವಿ ದೇವಸ್ಥಾನದಲ್ಲಿ ಆಯೋಜಿಸಿದ್ದ ಕೋವಿಡ್-19 ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕೋವಿಡ್ ಮಹಾಮಾರಿಯನ್ನು ಎಲ್ಲರೂ ಧೈರ್ಯದಿಂದ ಒಂದಾಗಿ ಎದುರಿಸಬೇಕಿದೆ. ನಮ್ಮ ನಿರ್ಲಕ್ಷ್ಯದಿಂದ ಸೋಂಕಿಗೆ ಒಳಗಾದರೆ ಯಾರನ್ನೂ ದೂರುವಂತಿಲ್ಲ. ಹೀಗಾಗಿ ಸರಕಾರ ವಿಧಿಸಿದ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಮಹಾಮಾರಿಯಿಂದ ಜಗತ್ತನ್ನು ಉಳಿಸಬೇಕಿದೆ ಎಂದು ಅವರು ಹೇಳಿದರು.

ಕೋವಿಡ್ ಸೋಂಕಿನಿಂದ ರಕ್ಷಣೆ ಪಡೆಯುವ ನಿಟ್ಟಿನಲ್ಲಿ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಾಹಿತಿ ಪತ್ರಗಳನ್ನು ವಿತರಿಸಿದ ಅವರು, ಬೆಳಗಾವಿ ಜಿಲ್ಲೆಯಲ್ಲಿ 4 ಲಕ್ಷ ಸದಸ್ಯರಿಗೆ ಮಾಹಿತಿ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಮಂಜುನಾಥ ಎನ್.ಆರ್., ಆಶಾ ಕಾರ್ಯಕರ್ತೆಯರಾದ ರಾಜಶ್ರೀ ಭಾತಕಾಂಡೆ, ಶೃತಿ ಶಿಂಗಿ, ಶೀಲಾ ಕೋಲ್ವಾರ ವೇದಿಕೆಯಲ್ಲಿದ್ದರು.

ಪ್ರತಿನಿಧಿ ವೀಣಾ ಸುತಾರ ಪ್ರಾರ್ಥಿಸಿದರು. ಮುಚ್ಚಂಡಿ ವಲಯ ಮೇಲ್ವಿಚಾರಕ ರಮೇಶ ಅಂಬಿಗ ಸ್ವಾಗತಿಸಿದರು. ಜ್ಞಾನವಿಕಾಸ ಮೇಲ್ವಿಚಾರಕಿ ಗಂಗೂಬಾಯಿ ಜಗತಾಪ ನಿರೂಪಿಸಿದರು. ಸೇವಾ ಪ್ರತಿನಿಧಿ ಭಾರತಿ ಕೊಲ್ವಾರ ವಂದಿಸಿದರು.


Spread the love

About Laxminews 24x7

Check Also

ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರ ಅವಹೇಳನೆ ಖಂಡಿಸಿ ಹುಕ್ಕೇರಿ ಯಲ್ಲಿ ಪ್ರತಿಟಭಟನೆ.

Spread the love ಹುಕ್ಕೇರಿ : ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರ ಅವಹೇಳನೆ ಖಂಡಿಸಿ ಹುಕ್ಕೇರಿ ಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ