ಭಾರತೀಯ ಬ್ಯಾಟರ್ಗಳ ಅಬ್ಬರ: 3ನೇ ದಿನದಾಟದಲ್ಲಿ ಆಸ್ಟ್ರೇಲಿಯಾ ತತ್ತರ
Laxminews 24x7
ನವೆಂಬರ್ 24, 2024
ರಾಜಕೀಯ, ರಾಜ್ಯ
52 Views
ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ (161) ಹಾಗೂ ವಿರಾಟ್ ಕೊಹ್ಲಿ (100) ಭರ್ಜರಿ ಶತಕ ಸಿಡಿಸಿದ್ದಾರೆ. ಈ ಶತಕಗಳ ನೆರವಿನಿಂದ ಟೀಮ್ ಇಂಡಿಯಾ ದ್ವಿತೀಯ ಇನಿಂಗ್ಸ್ನಲ್ಲಿ ಆಸ್ಟ್ರೇಲಿಯಾಗೆ 534 ರನ್ಗಳ ಗುರಿ ನೀಡಿದೆ.
ಪರ್ತ್ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್ನಲ್ಲಿ ಟೀಮ್ ಇಂಡಿಯಾ ಭರ್ಜರಿ ಪ್ರದರ್ಶನ ನೀಡಿದೆ. ಈ ಪಂದ್ಯದ ಮೂರನೇ ದಿನದಾಟದಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ಭಾರತೀಯ ಬ್ಯಾಟರ್ಗಳು ದ್ವಿತೀಯ ಇನಿಂಗ್ಸ್ನಲ್ಲಿ 487 ರನ್ಗಳಿಸಿ ಡಿಕ್ಲೇರ್ ಘೋಷಿಸಿದೆ. ಈ ಮೂಲಕ ಆಸೀಸ್ ಪಡೆಗೆ ಕೊನೆಯ ಇನಿಂಗ್ಸ್ನಲ್ಲಿ 534 ರನ್ಗಳ ಬೃಹತ್ ಮೊತ್ತದ ಗುರಿ ನೀಡಿದೆ.