Breaking News

ಕಲಬುರಗಿ ನವಜಾತ ಶಿಶು ಅಪಹರಣ ಪ್ರಕರಣ: 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು

Spread the love

ಕಲಬುರಗಿ, ನವೆಂಬರ್ 27: ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆ (ಜಿಮ್ಸ್) ಯ ತಾಯಿ ಮತ್ತು ಮಕ್ಕಳ ಚಿಕಿತ್ಸಾ ವಿಭಾಗಕ್ಕೆ ಶುಶ್ರೂಷಕಿಯರ (ನರ್ಸ್‌) ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯರು, ನವಜಾತ ಗಂಡು ಶಿಶುವನ್ನು ಅಪಹರಿಸಿದ 36 ಗಂಟೆಗಳಲ್ಲಿ ಮಗು ಮತ್ತೆ ತಾಯಿಯ ಮಡಿಲು ಸೇರುವಂತಾಗಿದೆ. ಚಿತ್ತಾಪುರ ತಾಲ್ಲೂಕಿನ ರಾವೂರ ಗ್ರಾಮದ ರಾಮಕೃಷ್ಣ ಸಗರ ಹಾಗೂ ಕಸ್ತೂರಿ ದಂಪತಿಯ ಶಿಶುವನ್ನು ಅಪಹರಿಸಲಾಗಿತ್ತು. ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಕುರಿತು ನಾಲ್ಕು ವಿಶೇಷ ತನಿಖೆ ತಂಡ ರಚನೆ ಮಾಡಲಾಗಿತ್ತು. ಪೊಲೀಸರು ತ್ವರಿತ ಗತಿಯಲ್ಲಿ ತನಿಖೆ ನಡೆಸಿ ಮಗುವನ್ನು ಪತ್ತೆ ಹಚ್ಚಿದ್ದಾರೆ.

ಬುಧುವಾರ ನಸುಕಿನ ವೇಳೆ ಸ್ವತಃ ಕಮಿಷನರ್ ಹಾಗೂ ಇತರ ಪೊಲೀಸ್ ಸಿಬ್ಬಂದಿ ಆಸ್ಪತ್ರೆಗೆ ತೆರಳಿ ಮಗುವನ್ನು ತಾಯಿ ಕಸ್ತೂರಿಯವರಿಗೆ ಒಪ್ಪಿಸಿ ಬಂದಿದ್ದಾರೆ. ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಮಂಗಳವಾರ ಬೆಳಗ್ಗೆ ವೈದ್ಯಕೀಯ ಸಚಿವ ಡಾಕ್ಟರ್ ಶರಣ್ ಪ್ರಕಾಶ್ ಪಾಟೀಲ್ ಆಸ್ಪತ್ರೆಗೆ ಭೇಟಿ ನೀಡಿ ತಾಯಿಗೆ ಸಾಂತ್ವನ ಹೇಳಿದ್ದರು. ಅಲ್ಲದೆ ಶೀಘ್ರವಾಗಿ ಮಗುವನ್ನು ಪತ್ತೆ ಹಚ್ಚಿ ಮರಳಿಸುವುದಾಗಿ ಅಭಯ ನೀಡಿದರು. ಪ್ರಕರಣ ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಇಲಾಖೆ, ನಾನಾ ಹಂತಗಳಲ್ಲಿ ತನಿಖೆ, ಕಾರ್ಯಾಚರಣೆ ನಡೆಸಿ ಮಗುವನ್ನು ರಕ್ಷಣೆ ಮಾಡಿದೆ.

ಪ್ರಕರಣದ ಹಿನ್ನೆಲೆ

ಕಸ್ತೂರಿ ಎಂಬವರು ಸೋಮವಾರ (ನ. 25) ನಸುಕಿನ ಜಾವ 4 ಗಂಟೆಗೆ ಗಂಡು ಮಗುವಿಗೆ ಜನ್ಮ ನೀಡಿದ್ದರು. ಸಂಜೆ ನರ್ಸ್​ ವೇಷದಲ್ಲಿ ಸಂಪೂರ್ಣ ಮುಖ ಮುಚ್ಚಿಕೊಂಡು ಬಂದಿದ್ದ ಇಬ್ಬರು ಮಹಿಳೆಯರು ರಕ್ತ ತಪಾಸಣೆ ಮಾಡಬೇಕು ಮಗು ಕರೆದುಕೊಂಡು ಬನ್ನಿ ಎಂದು ಹೇಳಿದ್ದರು. ಹೀಗಾಗಿ, ಕಸ್ತೂರಿ ಅವರ ಸಂಬಂಧಿ ರಕ್ತ ತಪಾಸಣೆಗಾಗಿ ಮಗುವನ್ನು ತೆಗೆದುಕೊಂಡು ಹೋಗಿದ್ದರು. ಈ ವೇಳೆ ಮಹಿಳೆಯರು ಮಗುವನ್ನು ನಮಗೆ ಕೊಡಿ ಎಂದಿದ್ದರು. ನಂತರ, ಮಗುವನ್ನು ಎತ್ತಿಕೊಂಡು ಅಲ್ಲಿಂದ ಪರಾರಿಯಾಗಿದ್ದರು.


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ