Breaking News

ದೆಹಲಿಯಿಂದ ಲಿಸ್ಟ್ ಬಂದರೆ ಎಲ್ಲ ಬದಲಾಗಬೇಕು. ಮನೆ ಖಾಲಿ ಮಾಡಬೇಕ:ಸಚಿವ ಸತೀಶ್ ಜಾರಕಿಹೊಳಿ

Spread the love

ರಾಜ್ಯ ಸಚಿವ ಸಂಪುಟ ಪುನಾರಚನೆ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆ ಆರಂಭವಾಗಿದೆ. ಬೆಳಗಾವಿ ಅಧಿವೇಶನದ ಬಳಿಕ ಸಂಪುಟ ಪುನಾರಚನೆ, ಕೆಲವರ ಖಾತೆ ಬದಲಾವಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದೇ ವೇಳೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸಚಿವ ಸಂಪುಟ ಪುನಾರಚನೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಕೆಲವರ ಖಾತೆ ಬದಲಾವಣೆ ಬಗ್ಗೆ ಚರ್ಚೆ ಇದೆ. ಆದರೆ ಯಾವಾಗ ಮಾಡುತ್ತಾರೆ ಎಂದು ಗೊತ್ತಿಲ್ಲ ಎಂದು ಹೇಳಿದ್ದಾರೆ.

ಸಂಪುಟ ಪುನಾರಚನೆ ಮಾಡದೆಯೂ ಇರಬಹುದು. ನನಗಂತೂ ಎರಡು ವರ್ಷಕ್ಕೆ ಸ್ಥಾನ ಬದಲಾವಣೆ ಎಂದು ಹೇಳಿಲ್ಲ. ದೆಹಲಿಯಿಂದ ಲಿಸ್ಟ್ ಬಂದರೆ ಎಲ್ಲರೂ ಬದಲಾಗಬೇಕು.

ಲಿಸ್ಟ್ ನಲ್ಲಿ ಹೆಸರು ಬಂದರೆ ಮನೆ ಖಾಲಿ ಮಾಡಿಕೊಂಡು ಹೋಗಬೇಕು. ದೆಹಲಿ ಹೈಕಮಾಂಡ್ ನಾಯಕರದ್ದೇ ಅಂತಿಮ ತೀರ್ಮಾನ. ಅವರೇ ಫೈನಲ್ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ