ಚೆನ್ನೈ : ಟಿವಿ ನೋಡಲು ಮನೆಗೆ ಬಂದ 11 ವರ್ಷದ ಬಾಲಕಿಯನ್ನು ಮನೆಯ ಮಾಲೀಕನ ಮಗ ಹಾಗೂ ಆತನ ಸ್ನೇಹಿತರು ಸೇರಿ ಅತ್ಯಾಚಾರ ಎಸಗಿದ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ.
ಮಾಲೀಕನ ಮಗ 10ನೇ ತರಗತಿಯಲ್ಲಿ ಓದುತ್ತಿದ್ದ ಹಿನ್ನಲೆಯಲ್ಲಿ ಆನ್ ಲೈನ್ ಕ್ಲಾಸ್ ಗಾಗಿ ಮೊಬೈಲ್ ನೀಡಲಾಗಿತ್ತು. ಅದರಲ್ಲಿ ಆತ ತನ್ನ ಇಬ್ಬರು ಸ್ನೇಹಿತರ ಜೊತೆ ಸೇರಿ ಅಶ್ಲೀಲ ವಿಡಿಯೋಗಳನ್ನು ನೋಡುತ್ತಿದ್ದ. ಒಮ್ಮೆ ಬಾಲಕಿ ಯಾರು ಇಲ್ಲದ ವೇಳೆ ಮನೆಗೆ ಟಿವಿ ನೋಡಲು ಬಂದಾಗ ಮೂವರು ಸೇರಿ ಆಕೆಗೆ ಬಲವಂತವಾಗಿ ಅಶ್ಲೀಲ ವಿಡಿಯೋಗಳನ್ನು ತೋರಿಸಿ ಅತ್ಯಾಚಾರ ಎಸಗಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದು, ಇಬ್ಬರನ್ನು ಬಂಧಿಸಿ ಬಾಲಾಪರಾಧಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದು, ಇನ್ನೊಬ್ಬ ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.
Laxmi News 24×7