ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ವಿಜಯಪುರ ನಗರದಲ್ಲಿ ಭೀಮ ಆರ್ಮಿಯ ಕರ್ನಾಟಕ ಏಕತಾ ಮಿಷನ್ ವಿಜಯಪುರ ಜಿಲ್ಲಾ ಸಮಿತಿಯಿಂದ ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
‘ನಮ್ಮನ್ನು ಗೌರವಿಸುವ ಸಂವಿಧಾನ ಬರಲಿ ಎಂದು ಹೇಳಿಕೆ ನೀಡುವ ಮೂಲಕ ಈಗಿರುವ ಶ್ರೇಷ್ಠ ಸಂವಿಧಾನಕ್ಕೆ ಅಗೌರವ ಸೂಚಿಸಿರುವ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಇದೇ ವೇಳೆ ಪೇಜಾವರ ಶ್ರೀಗಳ ಭಾವಚಿತ್ರವನ್ನು ಬೆಂಕಿ ಹಾಕಿ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಅರ್ಧಾ ಜೀಲೆಬಿ ಎಣ್ಣ್ಯಾಗ್ ಪೇಜಾವರ ಮಣ್ಣಾಗ..ಅಟ್ಟಂಗ ಪಟ್ಟಂಗ ಪೇಜಾವರ ಸ್ವಾಮಿ ಲಫಂಗ್ ಎಂದು ಘೋಷಣೆ ಕೂಗಿದರು. ಇನ್ನೂ ಶ್ರೀಗಳು ಆಡಿರುವ ಮಾತು, ದೇಶದ ಸಮಸ್ತ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು ಹಾಗೂ ಸ್ವಾತಂತ್ರ ಪ್ರಿಯರ ಹಕ್ಕುಗಳನ್ನು ಕಸಿಯುವ ಹುನ್ನಾರದ ಭಾಗವಾಗಿ ಗೋಚರಿಸುತ್ತಿದೆ ಎಂದು ಆರೋಪಿಸಿದರು.