ಬೆಳಗಾವಿ ಸುವರ್ಣ ವಿಧಾನಸೌಧದ ಪಕ್ಕ ಆಡಳಿತ ಸೌಧ ನಿರ್ಮಾಣ ಮಾಡಲು ಅಧಿವೇಶನದಲ್ಲಿ ಸರಕಾರ ನಿರ್ಣಯವನ್ನು ತೆಗೆದುಕೊಳ್ಳಬೇಕು ಎಂದು ಉತ್ತರ ಕರ್ನಾಟಕ ವಿಕಾಸ ವೇದಿಕೆಯ ಅಧ್ಯಕ್ಷ ಬಿ.ಡಿ.ಹಿರೇಮಠ ಹೇಳಿದರು.
ಮಂಗಳವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಬೆಳಗಾವಿ ಸುವರ್ಣ ವಿಧಾನ ಸೌಧಕ್ಕೆ ಶಕ್ತಿ ತುಂಬುವ ಕೆಲಸ ಮಾಡಬೇಕು ಜೊತೆಗೆ ಬೆಳಗಾವಿಯನ್ನು ಎರಡನೇ ರಾಜ್ಯದ ರಾಜಧಾನಿಯನ್ನಾಗಿ ತೀರ್ಮಾನ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಹೋರಾಟದ ಸ್ವರೂಪ ಬದಲಾವಣೆಯಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಉತ್ತರ ಕರ್ನಾಟಕದ ಜನರ ನ್ಯಾಯಯುತವಾದ ಬೇಡಿಕೆ ಹೋರಾಟ ಮಾಡಿ ಪಡೆಯುವ ಅನಿವಾರ್ಯತೆ ಇದೆ. ಜನಪ್ರತಿನಿದಿಗಳು ಜನಪರ ಕೆಲಸ ಮಾಡಿದರೆ ಇಂಥ ಹೋರಾಟಗಳು ನಡೆಯುವುದಿಲ್ಲ ಎಂದರು.
ಬೆಳಗಾವಿ ಸುವರ್ಣ ವಿಧಾನಸೌಧವನ್ನು ಕಳೆದ. 2011 ರಲ್ಲಿ ಬೆಳಗಾವಿಯಲ್ಲಿ ರಾಷ್ಟ್ರಪತಿ ಉದ್ಘಾಟನೆ ಮಾಡಿದರು. ಇಲ್ಲಿಯವರೆಗೂ ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆಯಿಂದ ಜನರ ಸ್ಪಂದನೆಗೆ ನ್ಯಾಯಯುತ ಸ್ಪಂದನೆ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಉತ್ತರ ಕರ್ನಾಟಕದ ಸಮಸ್ಯೆಯ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಬೆಳಗಾವಿಯ ಅಧಿವೇಶನದಲ್ಲಿ ಸರಕಾರ 10 ದಿನದ ಅಧಿವೇಶನವನ್ನು ಕಾಟಾಚಾರಕ್ಕೆ ನಡೆಸುತ್ತಿವೆ. ವಿನಃ ಇಲ್ಲಿಯವರೆಗೂ ಜನರ ಆಶೋತ್ತರಗಳಿಗೆ ಸ್ಪಂದಿಸಿಲ್ಲ ಎಂದರು.
ಅಶೋಕ ಪೂಜಾರಿ ಮಾತನಾಡಿ, ಬೆಳಗಾವಿ ಚಳಿಗಾಲದ ಅಧಿವೇಶನವನ್ನು ಕಾಟಾಚಾರಕ್ಕೆ ನಡೆಸಬೇಡಿ. ಈ ಭಾಗದ ಜನರ ಸಮಸ್ಯೆಯ ಬಗ್ಗೆ ಬೆಳಕು ಚೆಲ್ಲುವ ಕೆಲಸ ಮಾಡಬೇಕು ಎಂದರು.
ರಾಜಕೀಯ ಇಚ್ಛಾಶಕ್ತಿಯಿಂದ ಬೆಳಗಾವಿಯಲ್ಲಿ ಸುವರ್ಣ ವಿಧಾನಸೌಧ ನಿರ್ಮಾಣ ಮಾಡಿ ಉತ್ತರ ಕರ್ನಾಟಕದ ಜನರಿಗೆ ನ್ಯಾಯ ಸಿಗುತ್ತದೆ ಎನ್ನುವ ಆಶಾ ಭಾವನೆ ಇತ್ತು. ಆದರೆ ಈ ಭಾಗದ ಜನರಿಗೆ ಬೆಳಗಾವಿ ಅಧಿವೇಶನದಿಂದ ಯಾವುದೇ ಲಾಭವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.