Breaking News

ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣ: ಐವಿ ಗ್ಲುಕೋಸ್​ನಲ್ಲಿ ಆಘಾತಕಾರಿ ಅಂಶ ಪತ್ತೆ

Spread the love

ಬಳ್ಳಾರಿ, (ಡಿಸೆಂಬರ್ 03): ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಐವಿ ಫ್ಲೂಯಿಡ್ ವರದಿಯಲ್ಲಿ ಶಾಕಿಂಗ್ ನ್ಯೂಸ್ ಬಹಿರಂಗವಾಗಿದೆ. 92 ಐವಿ ಫ್ಲೂಯಿಡ್​​ ಸ್ಯಾಂಪಲ್ಸ್​ಗಳ ವರದಿ ಬಂದಿದ್ದು, ಅದರಲ್ಲಿ ಫಂಗಸ್ ಸೇರಿದ್ದಂತೆ ಬ್ಯಾಕ್ಟೀರಿಯಾ ಅಂಶ ಕಂಡುಬಂದಿದೆ.

ರಾಜ್ಯದ ಐವಿ ಫ್ಲೂಯಿಡ್ ರಿಪೋರ್ಟ್​ನಲ್ಲಿ ಅಸುರಕ್ಷಿತ ಎಂದು ಉಲ್ಲೇಖಿಸಲಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತಾ ಅವರು ಈ ಬಗ್ಗೆ ಸಂಪೂರ್ಣ ವಿವರಣೆ ಕೇಳಿ ಕೇಂದ್ರದ ಡ್ರಗ್ ಕಂಟ್ರೋಲ್ ಇಲಾಖೆಗೆ ಆರೋಗ್ಯ ಇಲಾಖೆಗೆ ಪತ್ರ ಬರೆದಿದ್ದಾರೆ.

ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣ: ಐವಿ ಗ್ಲುಕೋಸ್​ನಲ್ಲಿ ಆಘಾತಕಾರಿ ಅಂಶ ಪತ್ತೆ

ಪಶ್ಚಿಮ ಬಂಗಾಳದ ಕಂಪನಿ ಬರೋಬ್ಬರಿ 192 ಬ್ಯಾಚ್​ಗಳಲ್ಲಿ ಔಷಧಿ ಕಳಿಸಿತ್ತು. ಬಳಕೆ ಮಾಡುವುದಕ್ಕೆ ಶುರು ಮಾಡಿದ ಆರಂಭದಲ್ಲೇ ಐವಿ ರಿಂಗರ್ ಲ್ಯಾಕ್ಟೇಟ್ ಬಗ್ಗೆ ಶಂಕೆ ಎದ್ದಿತ್ತು.

ಬಳಿಕ 22 ಬ್ಯಾಚ್​ಗಳು ಉತ್ತಮ ಗುಣಮಟ್ಟ ಹೊಂದಿಲ್ಲವೆಂಬ ವರದಿ ಹೊರಬಿದ್ದಿತ್ತು. ಖುದ್ದು ರಾಜ್ಯದ ಡ್ರಗ್ ಕಂಟ್ರೋಲ್ ಐವಿ ರಿಂಗರ್ ಲ್ಯಾಕ್ಟೇಟ್ ಗುಣಮಟ್ಟ ಉತ್ತಮವಾಗಿಲ್ಲ ಅನ್ನೋ ರಿಪೋರ್ಟ್ ಕೊಟ್ಟಿತ್ತು.

ನಂತರ ಐವಿ ರಿಂಗ್ ಬಳಸಬೇಡಿ ಎಂದು ತಡೆಹಿಡಿದು ಎಲ್ಲ ಆಸ್ಪತ್ರೆಗಳಿಗೂ ಸುತ್ತೋಲೆ ಹೊರಡಿಸಿತ್ತು. ಪಶ್ಚಿಮ ಬಂಗಾಳದಿಂದ ಬಂದಿದ್ದ ಅಷ್ಟು ಬ್ಯಾಚ್​ಗಳಿಗೆ ಬ್ರೇಕ್ ಹಾಕಿ, ಬಳಿಕ ಬ್ಲಾಕ್ ಲಿಸ್ಟ್​ಗೆ ಸೇರಿಸಿತ್ತು. ಆದ್ರೆ ಕೇಂದ್ರ ಡ್ರಗ್ ಲ್ಯಾಬ್​ನಲ್ಲಿ ಇದೇ ಔಷಧಿಯ 22 ಬ್ಯಾಚ್​ಗಳು ಪಾಸ್ ಆಗಿವೆ ಎನ್ನಲಾಗಿದೆ.


Spread the love

About Laxminews 24x7

Check Also

ಮಿರಜ್‌ನಲ್ಲಿ 1 ಕೋಟಿ ರೂಪಾಯಿ ಮೌಲ್ಯದ ನಕಲಿ ನೋಟುಗಳ ಜಪ್ತಿ

Spread the love ಚಿಕ್ಕೋಡಿ:ಮಹಾರಾಷ್ಟ್ರ- ಕರ್ನಾಟಕ ಗಡಿ ಭಾಗದಲ್ಲಿ ಇತ್ತಿಚಿಗೆ ವಿಶೇಷ ಕಾರ್ಯಾಚರಣೆ ನಡೆಸಿದ ಮಹಾರಾಷ್ಟ್ರ ಪೊಲೀಸರು, ಬರೋಬ್ಬರಿ 1 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ