Breaking News

ಮುಡಾ ಹಗರಣರಾತ್ರೋರಾತ್ರಿ 48 ಸೈಟ್​ಗಳು ರದ್ದು

Spread the love

ಬೆಂಗಳೂರು: ಮುಡಾ ಹಗರಣದ ವಿಚಾರದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಮುಡಾ ಕ್ಲೀನ್​ಗೆ ಮೊದಲ ಹೆಜ್ಜೆ ಇಟ್ಟಿರುವ ಸಿಎಂ ಸಿದ್ದರಾಮಯ್ಯ ರಾತ್ರೋರಾತ್ರಿ 48 ಸೈಟ್​ಗಳನ್ನು ರದ್ದು ಮಾಡಿದ್ದಾರೆ.

ಹಿಂದಿನ‌ ಮುಡಾ ಆಯುಕ್ತ ದಿನೇಶ್ ಕುಮಾರ್ ಎಲ್ಲಾ ಕಾನೂನುಗಳನ್ನು ಗಾಳಿಗೆ ತೂರಿ 48 ಜನರಿಗೆ ಕೋಟ್ಯಾಂತರ ರೂ. ಬೆಲೆ ಬಾಳುವ ಸೈಟ್ ಗಳನ್ನು 5-6 ಲಕ್ಷಕ್ಕೆ ಹಂಚಿದ್ದರು. ಅದನ್ನು ಇದೀಗ ರದ್ದುಪಡಿಸಲಾಗಿದೆ.

ಅಸ್ತಿತ್ವವೇ ಇಲ್ಲದೆ ಸಹಕಾರ ಸಂಘದ ಹೆಸರಿನಲ್ಲಿ ಸೈಟ್​ಗಳನ್ನು ದಿನೇಶ್ ಕುಮಾರ್ ಹಂಚಿಕೆ ಮಾಡಿದ್ದರು. ಚಾಮುಂಡೇಶ್ವರಿ‌ ನಗರ ಸರ್ವೊದಯ ಸಂಘದ ಸದಸ್ಯರು ಎಂದು ಹಂಚಿಕೆ ಮಾಡಿದ್ದರು.

ಸೈಟ್ ಹಂಚಿಕೆಯಲ್ಲಿ ಬೇನಾಮಿ ಇದೆ ಎಂಬ ಆರೋಪ ಬಂದಿತ್ತು. ಇದು ಬಹುದೊಡ್ಡ ಅಕ್ರಮ ಎಂದು ಹಿಂದಿನ ಜಿಲ್ಲಾಧಿಕಾರಿ ರಾಜೇಂದ್ರ ವರದಿ ಕೊಟ್ಟಿದ್ದರು.

ಆ ವರದಿಯನ್ನು ಆಂತರಿಕವಾಗಿ ತನಿಖೆ ಮಾಡಿಸಿದ್ದ ರಾಜ್ಯ ಸರ್ಕಾರ ನಿನ್ನೆ ರಾತ್ರೋ ರಾತ್ರಿ ಎಲ್ಲಾ 48 ಸೈಟ್ ಗಳನ್ನು ರದ್ದು ಪಡಿಸಿದೆ. ಈ ಕುರಿತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಘುನಂದನ್ ಆದೇಶ ಹೊರಡಿಸಿದ್ದಾರೆ.

48 ಸೈಟ್​ಗಳ ಖಾತೆ ನೋಂದಣಿ ಖಾತೆ ವರ್ಗಾವಣೆ ಮಾಡದಂತೆ ನಗರ ಪಾಲಿಕೆ ಆಯುಕ್ತರಿಗೆ ಮತ್ತು ಜಿಲ್ಲಾ ನೋಂದಣಾಧಿಕಾರಿಗೆ ರಘುನಂದನ್ ಪತ್ರ ಬರೆದಿದ್ದಾರೆ. 48 ಸೈಟ್ ಗಳ ವಿವರದ ಜೊತೆ ಪತ್ರ ಬರೆದಿದ್ದಾರೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ