Breaking News

ವಿಕಲ ಚೇತನರು ದೇವರ ಮಕ್ಕಳು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…!

Spread the love

ಬೆಂಗಳೂರು : ವಿಕಲ ಚೇತನರಾದರೂ ಸಂಗೀತ ಕ್ಷೇತ್ರದಲ್ಲಿ ಪಂಚಾಕ್ಷರಿ ಗವಾಯಿಗಳು, ಪುಟ್ಟರಾಜ ಗವಾಯಿಗಳು ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿ ನಮಗೆಲ್ಲಾ ಮಾದರಿಯಾಗಿದ್ದಾರೆ. ವಿಕಲ ಚೇತನರು ಅಂದರೆ ದೇವರ ಮಕ್ಕಳಿದ್ದಂತೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಕಂಠೀರವ ಒಳಾಂಗಣ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ವಿಶ್ವ ವಿಕಲಚೇತನರ ದಿನಾಚರಣೆಯಲ್ಲಿ ಮಾತನಾಡಿದ ಅವರು ವಿಶೇಷ ಚೇತನರಿಗೆ ಮನೋಬಲವೇ ಶಕ್ತಿ ಎಂದರು.

ಳೆದ ಬಾರಿ ಸಾಮಾನ್ಯ ಒಲಿಂಪಿಕ್ಸ್‌ಗಿಂತಲೂ ಪ್ಯಾರಾ ಒಲಿಂಪಿಕ್ಸ್‌ನಲ್ಲಿ ವಿಶೇಷ ಚೇತನರು ೨೧ ಪದಕಗಳನ್ನು ಭಾರತಕ್ಕೆ ಗೆದ್ದುಕೊಟ್ಟರು. ಅಂಗ ವೈಕಲ್ಯವನ್ನು ಮೆಟ್ಟಿ ನಿಂತು ವಿಕಲ ಚೇತನರು ಉತ್ತಮ ಸಾಧನೆ ಮಾಡಿರುವ ಉದಾಹರಣೆಗಳು ನಮ್ಮ ಮುಂದಿವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರಥ್ಯದ ನಮ್ಮ ಸರ್ಕಾರ ವಿಶೇಷ ಚೇತನರ ಕಾರ್ಯಕ್ರಮಗಳನ್ನು ಮುಟ್ಟಿಸುತ್ತೇವೆ. ಭಗವಂತನ ಸೃಷ್ಟಿ ನಿಮಗೆ ಸಾಧನೆ ಮಾಡಲು ಪ್ರೇರಣೆಯಾಗಿದೆ. ವಿಘ್ನಗಳನ್ನು ನಿವಾರಿಸುವ ಗಣಪತಿಯೇ ವಿಕಲಚೇತನರಿಗೆ ಸ್ಫೂರ್ತಿ. ಹಾಗಾಗಿ ಅವರಲ್ಲಿ ಆತ್ಮಬಲ ಹೆಚ್ಚಿದೆ. ವಿಕಲಚೇತನರ ಸಾಧನೆ ಇತಿಹಾಸದ ಪುಟಗಳಲ್ಲಿದ್ದು, ಅವರ ಅಭಿವೃದ್ಧಿಗೆ ಹಾಗೂ ಕಲ್ಯಾಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ