Breaking News

ದೇವೇಗೌಡರ ತವರು ಜಿಲ್ಲೆಯಲ್ಲಿ ಜೆಡಿಎಸ್‌-ಬಿಜೆಪಿಗೆ ಟಕ್ಕರ್ ಕೊಡಲು ತಂತ್ರ

Spread the love

ಬೆಂಗಳೂರು, ಡಿಸೆಂಬರ್ 5: ಉಪಚುನಾವಣೆಯಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿರುವ ಕಾಂಗ್ರೆಸ್​ ಈಗ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ತವರು ಜಿಲ್ಲೆ ಹಾಸನದಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ. ಈ ಮೂಲಕ ಜೆಡಿಎಸ್‌-ಬಿಜೆಪಿ ಎರಡಕ್ಕೂ ಟಕ್ಕರ್‌ ಕೊಡಲು ‘ಕೈ’ ತಂತ್ರ ಹೂಡಿದ್ದು, ಎಲ್ಲರ ಚಿತ್ತ ಅತ್ತ ನೆಟ್ಟಿದೆ.

ಸಿಎಂ ಸಿದ್ದರಾಮಯ್ಯ ತಂಡ ವರ್ಸಸ್ ಡಿಸಿಎಂ ಡಿಕೆ ಶಿವಕುಮಾರ್ ತಂಡದ ನಡುವಣ ಮುಸುಕಿನ ಗುದ್ದಾಟದ ಮಧ್ಯೆ ಹಾಸನದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ಕ್ಷಣಗಣನೆ ಶುರುವಾಗಿದೆ. ಅರಸೀಕೆರೆ ರಸ್ತೆಯ ಎಸ್​ಎಂ ಕೃಷ್ಣ ನಗರದಲ್ಲಿರುವ ಕೆಎಸ್​ಸಿಎ ಕ್ರಿಕೆಟ್ ಮೈದಾನದಲ್ಲಿ ಬೃಹತ್ ವೇದಿಕೆ ಸಜ್ಜಾಗಿದೆ. ಲಕ್ಷ ಲಕ್ಷ ಜನರ ಆಗಮನದ ನಿರೀಕ್ಷೆ ಇದೆ.

ಎಷ್ಟು ಗಂಟೆಗೆ ಕಾಂಗ್ರೆಸ್ ಸಮಾವೇಶ?

ಬೆಳಗ್ಗೆ 11.30ಕ್ಕೆ ಹಾಸನದಲ್ಲಿ ಜನಕಲ್ಯಾಣ ಸಮಾವೇಶ ಉದ್ಘಾಟನೆ ಆಗಲಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಇಡೀ ಸಚಿವ ಸಂಪುಟ ದಂಡೇ ಕಾರ್ಯಕ್ರಮದಲ್ಲಿ ಭಾಗಿಯಾಗಲಿದೆ. 480 ಅಡಿ ಅಗಲ ಮತ್ತು 600 ಅಡಿ ಉದ್ದದ ಬೃಹತ್‌ ಟೆಂಟ್‌ ಹಾಕಲಾಗಿದೆ. ಸುಮಾರು 70 ಸಾವಿರ ಜನರು ಕೂರಲು ಆಸನಗಳ ವ್ಯವಸ್ಥೆ ಮಾಡಲಾಗಿದೆ.


Spread the love

About Laxminews 24x7

Check Also

ಔತಣ ಕೂಟದಲ್ಲಿ ಪಾಲ್ಗೊಂಡು, ಡಿಕೆಶಿಗೆ ಅಭಿನಂದಿಸಿದ ಹೆಬ್ಬಾಳಕರ್, ಹಟ್ಟಿಹೊಳಿ

Spread the loveಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೊಟೇಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ