Breaking News

ಮಹಾ ಸಿಎಂ ಆಗಿ ದೇವೇಂದ್ರ ಫಡ್ನವೀಸ್ ಪ್ರಮಾಣ ವಚನ ಏಕನಾಥ್ ಶಿಂಧೆ ಇನ್ನೆಂದೂ ಅವರು ಸಿಎಂ ಆಗಲು ಅಸಾಧ್; ಸಂಜಯ್ ರಾವತ್

Spread the love

ನವದೆಹಲಿ: ಮಹಾರಾಷ್ಟ್ರ ಸಿಎಂ ಆಗಿ ದೇವೇಂದ್ರ ಫಡ್ನವೀಸ್ ಪ್ರಮಾಣ ವಚನ ಸ್ವೀಕರಿಸುವ ಕೆಲವೇ ಗಂಟೆಗಳ ಮೊದಲು, ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಅವರು ಇಂದು ಏಕನಾಥ್ ಶಿಂಧೆ ಅವರ ಆಡಳಿತದ ಯುಗ ಮುಗಿದಿದೆ ಎಂದು ಹೇಳಿದ್ದಾರೆ.

ಏಕನಾಥ್ ಶಿಂಧೆ ಅವರು ಇನ್ನು ಮುಂದೆ ಮಹಾರಾಷ್ಟ್ರ ರಾಜ್ಯದ ಸಿಎಂ ಆಗುವುದಿಲ್ಲ ಎಂದು ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಂಜಯ್ ರಾವತ್, ಬಿಜೆಪಿ ಏಕನಾಥ್ ಶಿಂಧೆ ಅವರನ್ನು ಬಳಸಿಕೊಂಡು ಇದೀಗ ಪಕ್ಕಕ್ಕೆ ಎಸೆದಿದೆ ಎಂದು ಆರೋಪಿಸಿದ್ದಾರೆ.

ಶಿವಸೇನೆ (ಯುಬಿಟಿ) ನಾಯಕ ಏಕನಾಥ್ ಶಿಂಧೆ ಯುಗ ಮುಗಿದಿದೆ ಎಂದು ಸಂಜಯ್ ರಾವತ್ ಹೇಳಿದ್ದಾರೆ. 2 ವರ್ಷಗಳ ಕಾಲ ಏಕನಾಥ್ ಶಿಂಧೆ ಅವರನ್ನು ಬಳಸಿಕೊಂಡ ಬಿಜೆಪಿ ಇದೀಗ ತಿರಸ್ಕರಿಸಿದೆ ಎಂದು ಹೇಳಿದ್ದಾರೆ.

ಅವರು ಮತ್ತೆ ಈ ರಾಜ್ಯದ ಸಿಎಂ ಆಗುವುದಿಲ್ಲ ಎಂದು ರಾವತ್ ಹೇಳಿದ್ದಾರೆ. ತಮ್ಮೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಪಕ್ಷಗಳನ್ನು ದುರ್ಬಲಗೊಳಿಸಲು ಮತ್ತು ಕಿತ್ತೊಗೆಯಲು ಬಿಜೆಪಿ ತನ್ನ ರಾಜಕೀಯ ತಂತ್ರವನ್ನು ಬಳಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ