Breaking News

ಬಸವರಾಜ ಹೊರಟ್ಟಿ ವಿರುದ್ಧ FIR ದಾಖಲಿಸದ ಡಿಜಿಪಿ, ಎಸ್​ಪಿಗೆ ನೋಟಿಸ್​ ಜಾರಿ

Spread the love

ಧಾರವಾಡದ ಸರ್ವೋದಯ ಶಿಕ್ಷಣ ಸಂಸ್ಥೆಯಲ್ಲಿನ ವಿವಾದದ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರೀಯ ಪರಿಶಿಷ್ಟ ಪಂಗಡ ಆಯೋಗ ನೋಟಿಸ್ ಜಾರಿ ಮಾಡಿದೆ. ಬಸವರಾಜ ಹೊರಟ್ಟಿ ವಿರುದ್ಧ ದೂರು ದಾಖಲಿಸದ ಕಾರಣ ಈ ನೋಟಿಸ್ ಜಾರಿಯಾಗಿದೆ. ಪರಿಶಿಷ್ಟ ಪಂಗಡದ ವ್ಯಕ್ತಿಯ ಹಕ್ಕುಗಳ ಉಲ್ಲಂಘನೆಯ ಆರೋಪ ಕೇಳಿಬಂದಿದೆ. ಡಿಜಿ&ಐಜಿಪಿ ಮತ್ತು ಧಾರವಾಡ ಎಸ್ಪಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಧಾರವಾಡ, ಡಿಸೆಂಬರ್​ 07: ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ವಿರುದ್ಧ ಎಫ್​ಐಆರ್​​ ದಾಖಲಿಸದ ಹಿನ್ನೆಲೆ ರಾಜ್ಯ ಡಿಜಿ&ಐಜಿಪಿ ಮತ್ತು ಧಾರವಾಡ ಎಸ್​ಪಿಗೆ ರಾಷ್ಟ್ರೀಯ ಪರಿಶಿಷ್ಟ ಪಂಗಡ ಆಯೋಗದಿಂದ ನೋಟಿಸ್ ಜಾರಿ ಮಾಡಲಾಗಿದೆ. ಡಿ.12ರಂದು ದೆಹಲಿ ಕಚೇರಿಗೆ ಖುದ್ದು ವಿಚಾರಣೆಗೆ ಹಾಜರಾಗುವಂತೆ ಎಸ್​ಟಿ ಆಯೋಗ ಧಾರವಾಡ ಪೊಲೀಸ್​ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ್​ ಮತ್ತು ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್​ಗೆ ಸೂಚಿಸಿದೆ.

ಬಸವರಾಜ ಹೊರಟ್ಟಿ ವಿರುದ್ಧ ಅಕ್ರಮವೆಸಗಿದ ಆರೋಪ

ಧಾರವಾಡದ ಅರುಣ್ ಹಿರೇಹಾಳ ಎಂಬುವವರು ನೀಡಿದ ದೂರಿನ ಮೇರೆಗೆ ನೋಟಿಸ್ ಜಾರಿ ಮಾಡಲಾಗಿದೆ. ಪರಿಶಿಷ್ಟ ಪಂಗಡದ ವಾಲ್ಮೀಕಿ ಮಠಕ್ಕೆ ಸೇರಿದ್ದು ಎನ್ನಲಾದ ಧಾರವಾಡದ ಸರ್ವೋದಯ ಶಿಕ್ಷಣ ಸಂಸ್ಥೆಯಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ವಿರುದ್ಧ ಅಕ್ರಮವೆಸಗಿದ ಆರೋಪ ಕೇಳಿಬಂದಿತ್ತು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ