Breaking News

ಬಾಣಂತಿಯರ ಸಾವಿನ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ಬಿಜೆಪಿ ನಾಯಕರ ನಿಯೋಗ

Spread the love

ಬಳ್ಳಾರಿ (Ballari) ಜಿಲ್ಲಾ ಆಸ್ಪತ್ರೆ ಈಗ ಬಾಣಂತಿಯರ ಸರಣಿ ಸಾವಿನ ಮನೆಯಾಗಿದೆ. ಒಂದು ತಿಂಗಳ ಅಂತರದಲ್ಲಿ 6 ಬಾಣಂತಿಯರು ಸಾವನ್ನಪ್ಪಿದ್ದಾರೆ.

ಬಾಣಂತಿಯರ ಸಾವಿನ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ಬಿಜೆಪಿ ನಾಯಕರ ನಿಯೋಗ ಇಂದು ದೂರು ಕೂಡ ನೀಡಿದೆ. ಇದರ ಬೆನ್ನಲ್ಲೇ ಇದೀಗ ಆಹಾರ ಇಲಾಖೆ ಜೊತೆ ಔಷಧ ನಿಯಂತ್ರಣ ಮಂಡಳಿ ವಿಲೀನಕ್ಕೆ ಸಂಪುಟ ಸಭೆ ಗ್ರೀನ್ ಸಿಗ್ನಲ್ ನೀಡಿದೆ.

ಆ ಮೂಲಕ ಔಷಧ ನಿಯಂತ್ರಣ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದೆ.ವಿಧಾನಸೌಧದಲ್ಲಿ ಸಂಪುಟ ಸಭೆ ಬಳಿಕ ಸಚಿವ ಹೆಚ್‌.ಕೆ.ಪಾಟೀಲ್​ ಪ್ರತಿಕ್ರಿಯಿಸಿದ್ದು, ಔಷಧ ನಿಯಂತ್ರಣ ಇಲಾಖೆ ಹಾಗೂ ಆಹಾರ ಸುರಕ್ಷತೆ ಗುಣಮಟ್ಟ ಇಲಾಖೆಗಳನ್ನು ವಿಲೀನಗೊಳಿಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಪರಿಣಾಮಕಾರಿಯಾಗಿ ಕೆಲಸ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಆಹಾರ ಇಲಾಖೆ ಆಯುಕ್ತರೇ ಡ್ರಗ್ಸ್ ಕಂಟ್ರೋಲ್ ಬೋರ್ಡ್​ಗೆ ಮುಖ್ಯಸ್ಥರಾಗಿ ನೇಮಿಸಲಾಗಿದೆ. ಈಗಾಗಲೇ ಆಹಾರ ಇಲಾಖೆ ಆಯುಕ್ತ ಶ್ರೀನಿವಾಸ್​ಗೆ ಔಷಧ ನಿಯಂತ್ರಣ ಮುಖ್ಯಸ್ಥರಾಗಿ ನೇಮಿಸಿದ್ದು, ಇದೀಗ ಎರಡು ಇಲಾಖೆ ಸಿಬ್ಬಂದಿ ಮುಖ್ಯಸ್ಥರ ಅಡಿಯಲ್ಲಿ ಕಾರ್ಯ ನಿರ್ವಹಿಸಲು ಸೂಚನೆ ನೀಡಲಾಗಿದೆ.

ಜಮ್ಮು-ಕಾಶ್ಮೀರ್, ಗುಜರಾತ್, ಉತ್ತರ ಪ್ರದೇಶ ಹಾಗೂ ಇನ್ನು ಅನೇಕ ರಾಜ್ಯದಲ್ಲಿನ ಮಾದರಿ ಅಳವಡಿಕೆ ಮುಂದಾಗಿದೆ. ಬೇರೆ ರಾಜ್ಯದಲ್ಲಿ ಆಹಾರ ಹಾಗೂ ಡ್ರಗ್ಸ್ ಇಲಾಖೆ ಒಟ್ಟಿಗೆ ಕಾರ್ಯ ನಿರ್ವಹಿಸುತ್ತಿವೆ. ಈ ಹಿನ್ನೆಲೆ ಕರ್ನಾಟಕದಲ್ಲೂ ಇದೇ ಮಾದರಿಯಲ್ಲಿ ಇಲಾಖೆ ವಿಲೀನ ಮಾಡಲಾಗಿದೆ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ