ಬಳ್ಳಾರಿ, ಡಿಸೆಂಬರ್ 08: ಬಳ್ಳಾರಿ ಜಿಲ್ಲಾಸ್ಪತ್ರೆ (BIMS)ಯಲ್ಲಿ ಮೃತಪಟ್ಟ ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmed Khan) ಘೋಷಣೆ ಮಾಡಿದ್ದಾರೆ.
ಸಂಡೂರಿನಲ್ಲಿ ನಡೆದ ಅಭಿನಂದನಾ ಸಮಾವೇಶದಲ್ಲಿ ಮಾತನಾಡಿದ ಅವರು, ಈಗಾಗಲೇ 2 ಲಕ್ಷ ರೂ. ಪರಿಹಾರ ಘೋಷಣೆ ಆಗಿದೆ. ಜೊತೆಗೆ 3 ಲಕ್ಷ ರೂ. ಕೊಡುತ್ತೇವೆ ಎಂದು ತಿಳಿಸಿದರು.ಬಳ್ಳಾರಿ ಬಿಮ್ಸ್ನಲ್ಲಿ ಐವರು ಬಾಣಂತಿಯರು ಮೃತಪಟ್ಟಿದ್ದಾರೆ, ಇದು ದುರದೃಷ್ಟ. ಮೃತ ಬಾಣಂತಿಯರೆಲ್ಲರೂ ಬಡ ಕುಟುಂಬದವರು. ಹೀಗಾಗಿ, ಮೃತ ಬಾಣಂತಿಯರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡುತ್ತೇವೆ ಎಂದು ಹೇಳಿದರು.