Breaking News

ಕರ್ನಾಟಕ ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಇನ್ನಿಲ್ಲ

Spread the love

 

ಕರ್ನಾಟಕದ ಹತ್ತನೇ ಮುಖ್ಯಮಂತ್ರಿಯಾಗಿ, ದೇಶದ ವಿದೇಶಾಂಗ ಸಚಿವರಾಗಿ, ಮಾಹಾರಷ್ಟ್ರದ ರಾಜ್ಯಪಾಲರಾಗಿ ಮತ್ತು ಭಾರತದ ರಾಜಕಾರಣದಲ್ಲಿ ಇನ್ನೂ ಅನೇಕ ಜವಾಬ್ದಾರಿಗಳನ್ನು ವಹಿಸಿ ಛಾಪು ಮೂಡಿಸಿದ್ದ ಎಸ್​​ಎಂ ಕೃಷ್ಣ ಬೆಂಗಳೂರಿನಲ್ಲಿ ನಿಧನರಾದರು. ಸೋಮನಹಳ್ಳಿ ಮಲ್ಲಯ್ಯ ಕೃಷ್ಣ ರಾಜಕೀಯ ಜೀವನದ ಇಣುಕುನೋಟ ಇಲ್ಲಿದೆ.

ಬೆಂಗಳೂರು, ಡಿಸೆಂಬರ್​ 10: ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು (ಡಿಸೆಂಬರ್​ 10) ನಸುಕಿನ ಜಾವ 2:30ರ ಸುಮಾರಿಗೆ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್​​ಎಂ ಕೃಷ್ಣರನ್ನು ಮೊದಲು ವೈದೇಹಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಬಳಿಕ ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಹಿನ್ನಲೆ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು. ಡಾ. ಸತ್ಯನಾರಾಯಣ ಮೈಸೂರು, ಡಾ. ಸುನೀಲ್ ಕಾರಂತ್ ನೇತೃತ್ವದ ವೈದ್ಯರ ತಂಡ ಚಿಕಿತ್ಸೆಯನ್ನು ನೀಡಿತ್ತು. ಶ್ವಾಸಕೋಶದ ಸೋಂಕಿನ ಕಾರಣಕ್ಕೆ ಕೃಷ್ಣ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಐಸಿಯುಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿತ್ತು


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ