Breaking News

ಪಂಚಮಸಾಲಿ ಮೀಸಲಾತಿ ಹೋರಾಟ: ಐವರ ವಿರುದ್ಧ F.I.R.

Spread the love

ಬೆಳಗಾವಿ, ಡಿಸೆಂಬರ್​ 11: 2ಎ ಮೀಸಲಾತಿಗೆ ಆಗ್ರಹಿಸಿ ಲಿಂಗಾಯತ ಪಂಮಸಾಲಿ (Lingayat Panchamasali) ಸಮುದಾಯದವರು ಬೆಳಗಾವಿಯಲ್ಲಿ (Belagavi) ಬುಧವಾರ ನಡೆಸಿದ ಹೋರಾಟ ನಗರವನ್ನು ರಣರಂಗವಾಗಿಸಿತ್ತು.

ಪಂಚಮಸಾಲಿ ಸಮುದಾಯದ ಹೋರಾಟದ ವೇಳೆ ನಡೆದ ಕಲ್ಲು ತೂರಾಟದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಸೇರಿದಂತೆ 17 ಜನರಿಗೆ ಗಾಯವಾಗಿತ್ತು. ಹಾಗೇ ಏಳು ಸರ್ಕಾರಿ ಬಸ್, ಮೂರು ಪೊಲೀಸ್ ವಾಹನ ಜಖಂಗೊಂಡ ಹಿನ್ನೆಲೆಯಲ್ಲಿ ಹಿರೇಬಾಗೇವಾಡಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಲ್ಲು ಎಸೆದ ನಿಂಗಪ್ಪ ಬಣದ್, ರಾಮಗೌಡ ಫಕೀರಗೌಡ, ಉಮೇಶ್ ಇಂಗಳೆವಾರ್, ಮಂಜುನಾಥ್ ಬೆಂಡಿಗೇರಿ, ಮಂಜುನಾಥ್ ಗುಮ್ಮಗೋಳ ಹಾಗೂ ಇತರರ ಮೇಲೆ ಎಫ್​ಐಆರ್​ ದಾಖಲಾಗಿದೆ.

ಆರೋಪಿತರು ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ಮಾಡಿ ಗಂಭೀರ ಗಾಯಗೊಳಿಸಿದ್ದಾರೆ. ಅಲ್ಲದೇ ಕೊಲೆ ಮಾಡಲು ಯತ್ನಸಿದ್ದಾರೆ. ಹಾಗೂ ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿ ಮಾಡಿದ್ದಾರೆ ಎಂದು ಬಿಎನ್‌ಎಸ್ ಕಲಂ 115(2), 109(1), 118(2), 117(2), 352, 351(2), 132, 121, 223, 324,189, 189(3), 191(2), 190 ಅಡಿ ಕೇಸ್ ಪಿಐ ಆರ್.ಆರ್ ಪಾಟೀಲ್ ಅವರು ಕೇಸ್ ದಾಖಲಿಸಿಕೊಂಡಿದ್ದಾರೆ.


Spread the love

About Laxminews 24x7

Check Also

ಬಿಎಂಐಸಿ ಯೋಜನೆಯನ್ನು ಮರುಪರಿಶೀಲಿಸಲು ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್

Spread the loveಬೆಂಗಳೂರು: ಕಳೆದ 25 ವರ್ಷಗಳಲ್ಲಿ ಕೇವಲ ಒಂದು ಕಿಲೋ ಮೀಟರ್‌ ಮಾತ್ರ ನಿರ್ಮಾಣಗೊಂಡಿರುವ ಬೆಂಗಳೂರು ಮೈಸೂರು ಮೂಲ ಸೌಕರ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ