Breaking News

ರಾಜ್ಯದಾದ್ಯಂತ ರಸ್ತೆ ತಡೆಗೆ ಕರೆ ಇಷ್ಟು ದಿನ ಶಾಂತಿಯುತ ಹೋರಾಟ ಆಗಿತ್ತು, ಇನ್ಮೇಲೆ ಹಳ್ಳಿ ಹಳ್ಳಿಯಲ್ಲೂ ಕ್ರಾಂತಿಯುತ ಹೋರಾಟ

Spread the love

ಡಿಸೆಂಬರ್ 12: ಬೆಳಗಾವಿಯ ಸುವರ್ಣ ವಿಧಾನಸೌಧದ ಎದುರು ಸೋಮವಾರ ನಡೆದ ಪಂಚಮಸಾಲಿ 2ಎ ಮೀಸಲಾತಿ ಪ್ರತಿಭಟನೆ ವೇಳೆ ಲಾಠಿ ಚಾರ್ಜ್​ ನಡೆಸಿದ್ದಕ್ಕೆ ಮತ್ತಷ್ಟು ಕೆರಳಿರುವ ಬಸವ ಜಯಮೃತ್ಯುಂಜಯ ಸ್ವಾಮೀಜಿ, ನಮ್ಮ ಜನ ಇನ್ನಷ್ಟು ಪುಟಿದೇಳುತ್ತಾರೆ ಎಂದಿದ್ದಾರೆ.

ಅಲ್ಲದೆ, ಇಷ್ಟು ದಿನ ಶಾಂತಿಯುತ ಹೋರಾಟ ಆಗಿತ್ತು, ಇನ್ಮೇಲೆ ಹಳ್ಳಿ ಹಳ್ಳಿಯಲ್ಲೂ ಕ್ರಾಂತಿಯುತ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಅನುಮತಿ ಇಲ್ಲದೇ ಲಾಠಿ ಚಾರ್ಜ್​ ಆಗಿದ್ದು ಹೇಗೆ? ಹಾಗೆ ಆಗಿದ್ದೇ ನಿಜವಾದರೆ ಕೂಡಲೇ ಆ ಅಧಿಕಾರಿಯನ್ನು ಅಮಾನತು ಮಾಡಿ ಎಂದು ಜಯಮೃತ್ಯುಂಜಯ ಶ್ರೀ ಆಗ್ರಹಿಸಿದ್ದಾರೆ. ಜತೆಗೆ, ನಿಮ್ಮ ಊರಲ್ಲಿ ರಸ್ತೆ ತಡದು ಹೋರಾಟ ಮಾಡಿ ಎಂದು ಎಲ್ಲಾ ಲಿಂಗಾಯತ ಸಮುದಾಯದವರಿಗೆ ಕರೆ ನೀಡಿದ್ದಾರೆ.

ಇತ್ತ ಲಾಠಿ ಚಾರ್ಜ್‌ ಸಮರ್ಥಿಸಿಕೊಂಡಂತೆ ಮಾತನಾಡಿರುವ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್, ಗಲಾಟೆ ಮಾಡುವ ಉದ್ದೇಶದಿಂದಲೇ ಹೋರಾಟಗಾರರು ಬಂದಿದ್ದರು ಎಂದಿದ್ದಾರೆ.

ಏತನ್ಮಧ್ಯೆ, ಪಂಚಮಸಾಲಿಗಳಿಂದಲೇ ರಾಜ್ಯ ಸರ್ಕಾರ ಪತನವಾಗಲಿದೆ ಎಂದು ಮಾಜಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಭವಿಷ್ಯ ನುಡಿದಿದ್ದಾರೆ. ಕ್ರಿಮಿನಲ್ ಸರ್ಕಾರ ಎಂದು ಬಿಜೆಪಿ ನಾಯಕ ಸಿಟಿ ರವಿ ಗುಡುಗಿದ್ದಾರೆ.

ರಾಜ್ಯದಾದ್ಯಂತ ರಸ್ತೆ ತಡೆಗೆ ಕರೆ

ಪಂಚಮಸಾಲಿ ಸಮುದಾಯದ ಮೇಲೆ ಲಾಠಿಚಾರ್ಜ್ ಖಂಡಿಸಿ ಇಂದು ರಾಜ್ಯಾದ್ಯಂತ ರಸ್ತೆ ತಡೆದು ಧರಣಿ ನಡೆಸಲು ಜಯಮೃತ್ಯುಂಜಯ ಶ್ರೀ ಕರೆ ನೀಡಿದ್ದಾರೆ. ನಿಮ್ಮ ನಿಮ್ಮ ಊರಲ್ಲಿ ರಸ್ತೆ ತಡೆದು ಹೋರಾಟ ಮಾಡಿ ಎಂದು ಅವರು ಹೇಳಿದ್ದಾರೆ. ಇಂದು ಹಿರೇಬಾಗೇವಾಡಿ ಟೋಲ್ ನಾಕಾ ಬಂದ್ ಮಾಡುತ್ತೇವೆ. ಯಾವುದೇ ಕಾರಣಕ್ಕೆ ಹೋರಾಟ ನಿಲ್ಲಿಸುವುದಿಲ್ಲ ಎಂದು ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ