ಚಿಕ್ಕಮಗಳೂರು: 20 ರೂಪಾಯಿಯಲ್ಲಿ ಆಕೆ ವಾರಪೂರ್ತಿ ಬದುಕಬೇಕು. ಅದು ಮನೆಯಿಂದ ಹೊರಬರದಂತೆ. ಮನೆಯಲ್ಲಿ ರೇಷನ್ ಇದ್ರೆ ಅನ್ನ-ಆಹಾರ. ಇಲ್ಲದಿದ್ರೆ ಮನೆಯಲ್ಲಿ ಉಪವಾಸ.. ಅತ್ತೆ-ಗಂಡ ಹೋದಾಗಲೇ ಹೋದ್ರು, ಬಂದಾಗಲೇ ಬಂದ್ರು. ಮನೆಯಿಂದ ಹೋಗುವಾಗ ಮನೆಯಲ್ಲಿ ರೇಷನ್ ಎಲ್ಲಾ ಖಾಲಿ-ಖಾಲಿ. 3-4 ದಿನ ನೀರು ಕುಡಿದುಕೊಂಡೇ ಇರಬೇಕು. ಅದೂ ನೀರಿನ ಸಂಪರ್ಕ ಕಟ್ ಮಾಡಿರದಿದ್ರೆ. ಮನೆ ಕೆಲಸವೆಲ್ಲಾ ಮಾಡಬೇಕು.
ಅಡುಗೆ-ಊಟ ಮಾಡುವಂತಿಲ್ಲ. ಒಂದೇ ಚೇರ್. ಅಲ್ಲೇ ಕೂರಬೇಕು. ಮಹಡಿ ಮೇಲೆ ಮಲಗಬೇಕು. ಇದು ಅವಿದ್ಯಾವಂತರ ಕಥೆಯಲ್ಲ. ವೈದ್ಯನೋರ್ವ (Doctor) ತನ್ನ ಪತ್ನಿಗೆ 4 ವರ್ಷದಿಂದ ಮಾಡಿರೋ ಉಪಚಾರ.. ಆ ಗೃಹಣಿಯ ಸೋಚನೀಯ ಕಥೆ ಕೇಳಿದ್ರೆ ನೀವು ಮರುಗದೇ ಇರಲಾರಿರಿ.. ಅದೆಲ್ಲಿ ಅಂತೀರಾ.
ಈ ಸ್ಟೋರಿ ನೋಡಿ..ಆಸ್ಪತ್ರೆ ಬೆಡ್ ಮೇಲೆ ಕಣ್ಣೀರಿಡ್ತಿರೋ ಈಕೆ ಆ ವೈದ್ಯನ ಪತ್ನಿ.. ಈತನೇ ವೈದ್ಯ, ಆಕೆ ಗಂಡ ರವಿಕುಮಾರ್.. ಅಂದಹಾಗೇ, ಈಕೆ ಹೆಸ್ರು ವಿನುತಾ ರಾಣಿ. ವಯಸ್ಸು ಹತ್ರತ್ರ 45. ಚಿಕ್ಕಮಗಳೂರು (Chikkamagaluru) ನಗರದ ದೋಣಿಕಣ ನಿವಾಸಿ. 22 ವರ್ಷದ ಹಿಂದೆ ಡಾ.ರವಿಕುಮಾರ್ ಜೊತೆ ಮದುವೆ ಮಾಡಿಕೊಟ್ಟಿದ್ರು.. ಎಂಬಿಬಿಎಸ್ ಓದುತ್ತಿರೋ ಮಗನೂ ಇದ್ದಾನೆ. ಆದ್ರೆ, 4 ವರ್ಷದಿಂದ ಪತ್ನಿಗೆ ಮಾನಸಿಕ ಕಿರುಕುಳ ನೀಡ್ತಿರೋ ಪತಿಯಿಂದ ಈಕೆಗೆ ಗೃಹಬಂಧನಲ್ಲಿಟ್ಟಿದ್ದಾರೆ.