Breaking News

ಕಾಮಗಾರಿ ಗುಂಡಿಗೆ ಉರುಳಿದ ಟ್ರ‍್ಯಾಕ್ಟರ್

Spread the love

ತುಮಕೂರು: ಜೆಜೆಎಂ ಕಾಮಗಾರಿಗೆ ತೆಗೆದಿದ್ದ ಟ್ರಂಚ್‌ಗೆ ಟ್ರ‍್ಯಾಕ್ಟರ್ (Tractor) ಉರುಳಿ ಬಿದ್ದು ಚಾಲಕನ (Driver) ಕೈ ಮೂಳೆ ಮುರಿದಿರುವ ಘಟನೆ ಗುಬ್ಬಿ (Gubbi) ತಾಲೂಕಿನ ಚಿಕ್ಕಚೆಂಗಾವಿ ಗ್ರಾಮದ ಬಳಿ ನಡೆದಿದೆ.

ಗ್ರಾಮದಿಂದ ಹೆಬ್ಬೂರನ್ನು ಸಂಪರ್ಕಿಸುವ ರಸ್ತೆ ಬದಿ ಪೈಪ್ ಹುಗಿಯಲು ತೆಗೆದಿರುವ ಟ್ರಂಚ್ ಮುಚ್ಚದೆ ಅನೇಕ ದಿನಗಳಿಂದ ಹಾಗೆಯೇ ಬಿಡಲಾಗಿದೆ.

ಸಂಬಂಧಿಸಿದ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜೆಜೆಎಂ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದ್ದು, ಅಪೂರ್ಣಗೊಂಡಿದೆ. ಹಲವೆಡೆ ಪೈಪ್‌ಗಳನ್ನು ಸಂಪರ್ಕಿಸದೆ ಇರುವುದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ.

ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಸರ್ಕಾರ ಯೋಜನೆಯನ್ನು ಜಾರಿಗೊಳಿಸಿದ್ದರೂ, ಸಂಬಂಧಿಸಿದ ಅಧಿಕಾರಿಗಳು ವ್ಯವಸ್ಥಿತವಾಗಿ ಅನುಷ್ಠಾನಗೊಳಿಸದೆ ಅನುದಾನವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ 


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ