Breaking News

ಆಹಾರ ಸುರಕ್ಷತೆ ಗುಣಮಟ್ಟ ಇಲಾಖೆ ಮತ್ತು ಔಷಧ ನಿಯಂತ್ರಣ ಇಲಾಖೆ ವಿಲೀನ

Spread the love

ಬೆಂಗಳೂರು, ಡಿಸೆಂಬರ್​ 14: ಆಹಾರ ಸುರಕ್ಷತೆ ಗುಣಮಟ್ಟ ಇಲಾಖೆ (Food safety and quality Department) ಮತ್ತು ಔಷಧ ನಿಯಂತ್ರಣ ಇಲಾಖೆಗಳನ್ನು (Drug Control Department) ವಿಲೀನಗೊಳಿಸಿ ಕರ್ನಾಟಕ ಸರ್ಕಾರ (Karnataka Government) ಆದೇಶ ಹೊರಡಿಸಿದೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಎಂದು ಹೊಸದಾಗಿ ನಾಮಕರಣ ಮಾಡಲಾಗಿದೆ.

ಹೊಸ ಇಲಾಖೆಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತರೇ ಮುಖ್ಯಸ್ಥರಾಗಿದ್ದಾರೆ. ಎರಡು ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯನಿರ್ವಹಣೆಗೆ ಸೂಚನೆ ನೀಡಲಾಗಿದೆ.

ಬಳ್ಳಾರಿ ಜಿಲ್ಲಾಸ್ಪತ್ರೆಯ ಬಾಣಂತಿಯರ IV ರಿಂಗರ್ ಲ್ಯಾಕ್ಟೇಟ್ ದ್ರಾವಣ ಕಾರಣ ಎಂಬ ವಿಚಾರ ಬಹಿರಂಗಗೊಳ್ಳುತ್ತಿದ್ದಂತೆ ಔಷಧ ನಿಯಂತ್ರಣ ಇಲಾಖೆ ವಿರುದ್ಧ ಹಲವು ಆರೋಪ ಕೇಳಿಬಂದಿದ್ದವು. ಇದು ರಾಜ್ಯ ಸರ್ಕಾರ ಮುಜುಗರಗೊಳ್ಳುವಂತೆ ಮಾಡಿತ್ತು.

ಬಳಿಕ, ಡಿಸೆಂಬರ್​ 6 ರಂದು ನಡೆದ ಸಂಪುಟ ಸಭೆಯಲ್ಲಿ ಎರಡೂ ಇಲಾಖೆ ವಿಲೀನಕ್ಕೆ ಸಚಿವರು ಒಪ್ಪಿಗೆ ಸೂಚಿಸಿದ್ದರು. ಸಚಿವ ಸಂಪುಟದಲ್ಲಿ ಅನುಮೋದನೆ ದೊರೆತ ಬಳಿಕ ಸರ್ಕಾರ ಎರಡೂ ಇಲಾಖೆಗಳನ್ನು ವಿಲೀನಗೊಳಿಸಿ ಆದೇಶ ಹೊರಡಿಸಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ