ಹುಬ್ಬಳ್ಳಿ, ಡಿಸೆಂಬರ್ 14: ಸಿಎಂ ಸಿದ್ದರಾಮಯ್ಯ (Siddaramaiah) ಅವರಿಗೆ ಮುಸ್ಲಿಮರೆಂದರೆ ಪ್ರೀತಿ. ಅವರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು ಕೊಡುತ್ತಾರೆ
ಎಂದು ಪ್ರತಿಪಕ್ಷ ಉಪನಾಯಕ ಅರವಿಂದ ಬೆಲ್ಲದ ಆರೋಪ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದವರಿಗೆ ಇವರು ಮುತ್ತು ಕೊಡುತ್ತಾರೆ, ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆಕೋರರಿಗೆ ಮುತ್ತು ಕೊಡುತ್ತಾರೆ,
ಕುಕ್ಕರ್ ಬಾಂಬ್ ಇಟ್ಟವರಿಗೂ ಮುತ್ತು ಕೊಡುತ್ತಾರೆ. ಆದರೆ ಶಾಂತ ರೀತಿಯಿಂದ ಹೋರಾಟ ಮಾಡಿದ ನಮ್ಮ ಮೇಲೆ ಲಾಠಿ ಚಾರ್ಜ್ ಮಾಡುತ್ತಾರೆ ಎಂದು ವಾಗ್ದಾಳಿ ಮಾಡಿದ್ದಾರೆ.