Breaking News

ಗ್ರಾಮ ಪಂಚಾಯತಿ ಆಸ್ತಿಗಳ ಮ್ಯಾನ್ಯುಯಲ್ ಸಮೀಕ್ಷೆ ನಡೆಯುತ್ತಿದೆ – ಪ್ರಿಯಾಂಕ್ ಖರ್ಗೆ

Spread the love

ಬೆಳಗಾವಿ: ರಾಜ್ಯದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕೃಷಿ ತೆರಿಗೆ ನಿರ್ಧರಣೆಗೆ ಒಳಪಟ್ಟಿರದ ಎಲ್ಲಾ ಭೂಮಿ ಮತ್ತು ಕಟ್ಟಡಗಳ ಮ್ಯಾನ್ಯುಯಲ್ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ತಿಳಿಸಿದ್ದಾರೆ.

ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಎನ್.ರವಿಕುಮಾರ್ ಅವರು, ಗ್ರಾಮ ಪಂಚಾಯತಿಗಳಲ್ಲಿ ಕೃಷಿ ತೆರಿಗೆ ನಿರ್ಧರಣೆಗೆ ಒಳಪಟ್ಟಿರದ ಎಲ್ಲಾ ಭೂಮಿಗಳ ಮ್ಯಾನ್ಯುಯಲ್ ಸರಿಯಾಗಿ ಆಗಿಲ್ಲ. ಸಂಪೂರ್ಣವಾಗಿ ಆಸ್ತಿ ನಮೂದು ಆಗಬೇಕು. ಗ್ರಾಮ ಪಂಚಾಯತಿಗಳಲ್ಲಿ ಸರಿಯಾಗಿ ಆಸ್ತಿ ಪತ್ತೆ ಹಚ್ಚಿ, ತೆರಿಗೆ ಸಂಗ್ರಹ ಮಾಡಬೇಕು. ಇದರಿಂದ ಸರ್ಕಾರದ ಗ್ಯಾರಂಟಿಗೆ ಗ್ರಾಮೀಣಾಭಿವೃದ್ಧಿ ಇಲಾಖೆಯೇ ಹಣ ಕೊಡಬಹುದು. ಅಧಿಕಾರಿಗಳು ಸರಿಯಾಗಿ ಆಸ್ತಿ ಸರ್ವೇ ಮಾಡುತ್ತಿಲ್ಲ.ಬೆಂಗಳೂರಿನಲ್ಲಿ ಸರಿಯಾಗಿ ಸರ್ವೆ ಮಾಡಿಲ್ಲ. ಅಧಿಕಾರಿಗಳು ಎರಡು ಬುಕ್ ಇಟ್ಟುಕೊಂಡು ತೆರಿಗೆ ಸರ್ಕಾರಕ್ಕೆ ನಷ್ಟ ಮಾಡ್ತಿವೆ. ಇದರ ಬಗ್ಗೆ ಕ್ರಮ ತೆಗೆದುಕೊಳ್ಳಿ ಎಂದು ಪ್ರಶ್ನಿಸಿದರು


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ