Breaking News

ಸಿಬಿಐ ತನಿಖೆಗೆ ಸಹಕರಿಸಿ; ಸಿಎಂ ಸಿದ್ದರಾಮಯ್ಯಗೆ ವಿಜಯೇಂದ್ರ ಸವಾಲು

Spread the love

ಬೆಂಗಳೂರು: ವಕ್ಪ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು ಬಿ.ವೈ. ವಿಜಯೇಂದ್ರ ತಮಗೆ 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎಂದು ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೇರವಾಗಿ ಪತ್ರ ಬರೆದಿರುವುದು ಬಯಲಾಗಿದೆ. ಪ್ರಧಾನಮಂತ್ರಿ ಮೋದಿ ಈ ಆರೋಪವನ್ನು ಗಂಭೀರವಾಗಿ ಸ್ವೀಕರಿಸಿ ತಕ್ಷಣ ಸಿಬಿಐ ತನಿಖೆಗೆ ಆದೇಶಿಸಬೇಕೆಂದು ಆಗ್ರಹಿಸುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಮಾಡಿರುವ ಟ್ವೀಟ್ ಭಾರೀ ಸದ್ದು ಮಾಡುತ್ತಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿ.ವೈ. ವಿಜಯೇಂದ್ರ ಸಿದ್ದರಾಮಯ್ಯನವರಿಗೆ ತಿರುಗೇಟು ನೀಡಿದ್ದಾರೆ. ಅನ್ವರ್ ಮಾಣಿಪ್ಪಾಡಿ ವರದಿಯಲ್ಲಿರುವುದು ಕಾಂಗ್ರೆಸ್ಸಿಗರು ಆಕ್ರಮಿಸಿರುವ ವಕ್ಫ್ ಆಸ್ತಿಗಳ ಕುರಿತೇ ಹೊರತು ಬಿಜೆಪಿಯವರನ್ನು ಕುರಿತು ಅಲ್ಲ. ಕಾಂಗ್ರೆಸಿಗರ ವಿರುದ್ಧ ಇರುವ ಆರೋಪಕ್ಕೆ ಯಾರಾದರೂ 150 ಕೋಟಿ ರೂಪಾಯಿಗಳ ಆಮಿಷವನ್ನು ಒಡ್ಡಲು ಸಾಧ್ಯವೇ ಎಂಬ ಕನಿಷ್ಠ ವಿವೇಕವೂ ನಿಮಗಿಲ್ಲವಲ್ಲ? ತಲೆಬುಡವಿಲ್ಲದ ಆರೋಪವನ್ನು ಮಾಡಿ ನೀವು ಹಾಗೂ ನಿಮ್ಮ ಸಂಪುಟದ ಸಚಿವ ಪ್ರಿಯಾಂಕ್ ಖರ್ಗೆ ಸಂಭ್ರಮಿಸುತ್ತಿರುವ ಪರಿ ನಿಮ್ಮ ಬಾಲಿಶತನವನ್ನು ತೋರಿಸುತ್ತಿದೆಯೇ ಹೊರತು ನಿಮ್ಮ ರಾಜಕೀಯ ಜಾಣ್ಮೆಯನ್ನಲ್ಲ.

ತಾಕತ್ತಿದ್ದರೆ ನಿಮ್ಮ ವಿರುದ್ಧದ ಮುಡಾ ಹಗರಣದ ಸಿಬಿಐ ತನಿಖೆಗೆ ಸಹಕರಿಸಿ; ಸಿಎಂ ಸಿದ್ದರಾಮಯ್ಯಗೆ ವಿಜಯೇಂದ್ರ ಸವಾಲು

ನಿಮಗೆ ಧೈರ್ಯವಿದ್ದರೆ, ಉಚ್ಛ ನ್ಯಾಯಾಲಯದಲ್ಲಿರುವ ನಿಮ್ಮ ವಿರುದ್ಧದ ಮುಡಾ ಹಗರಣವನ್ನು ಸಿಬಿಐ ತನಿಖೆ ಕೋರಿದ ರಿಟ್ ಅರ್ಜಿಗೆ ಆಕ್ಷೇಪವೆತ್ತದೇ ಸಿಬಿಐ ತನಿಖೆ ನಡೆಯಲು ಅವಕಾಶ ಮಾಡಿಕೊಡಿ ನೋಡೋಣ ಎಂದು ವಿಜಯೇಂದ್ರ ಸವಾಲು ಹಾಕಿದ್ದಾರೆ.ಸಿಬಿಐ, ಇಡಿ ತನಿಖೆಗಳಿಗೆ ಬೆಚ್ಚಿಬಿದ್ದಿರುವ ನೀವು ರಾಜ್ಯಪಾಲರು ಪ್ರಾಸಿಕ್ಯೂಷನ್’ಗೆ ನೀಡಿದ ಅನುಮತಿಯನ್ನು ಪ್ರಶ್ನಿಸಿ ಘಟಾನುಘಟಿ ಹಿರಿಯ ವಕೀಲರನ್ನು ದೆಹಲಿಯಿಂದ ಕರೆಸಿಕೊಂಡು ಕಾನೂನು ರಕ್ಷಣೆ ಪಡೆಯಲು ವ್ಯರ್ಥ ಪ್ರಯತ್ನ ನಡೆಸಿದಿರಿ. ಉಚ್ಛ ನ್ಯಾಯಾಲಯದ ತೀರ್ಪಿನಿಂದ ಮುಖಭಂಗಕ್ಕೀಡಾದ ನಿಮಗೆ ಇನ್ನೊಬ್ಬರ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಲು ಯಾವ ನೈತಿಕತೆ ಇದೆ? ಎಂದು ವಿಜಯೇಂದ್ರ ಪ್ರಶ್ನಿಸಿದ್ದಾರೆ


Spread the love

About Laxminews 24x7

Check Also

ಫೆ.9ರಿಂದ ಮೆಟ್ರೋ ದರ ಏರಿಕೆಗೆ ಸರ್ಕಾರ ಒಪ್ಪಿಗೆ?

Spread the loveಬೆಂಗಳೂರು: ಮೆಟ್ರೋ  ಪ್ರಯಾಣಿಕರಿಗೆ ಮತ್ತೊಮ್ಮೆ ಶಾಕ್ ಎದುರಾಗಿದೆ. ಫೆಬ್ರವರಿ 9ರಿಂದ ಮತ್ತೆ ಮೆಟ್ರೋ ದರ ಏರಿಕೆಯಾಗುವ ಸಾಧ್ಯತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ