Breaking News
Home / ಜಿಲ್ಲೆ / ಬೀದರ್ / ಗಡಿಜಿಲ್ಲೆ ಬೀದರ್‌ನಲ್ಲಿ 500 ಗಡಿದಾಟಿದ ಸೋಂಕಿತರ ಸಂಖ್ಯೆ………

ಗಡಿಜಿಲ್ಲೆ ಬೀದರ್‌ನಲ್ಲಿ 500 ಗಡಿದಾಟಿದ ಸೋಂಕಿತರ ಸಂಖ್ಯೆ………

Spread the love

ಬೀದರ್: ಮಹಾಮಾರಿ ಡ್ರ್ಯಾಗನ್ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, ಜಿಲ್ಲೆಯಲ್ಲಿ ಇಂದು ಕೂಡ 5 ಕೊರೊನಾ ಪಾಸಿಟಿವ್ ದೃಢವಾಗಿದೆ.

ಜಿಲ್ಲೆಯ ಬಸವಕಲ್ಯಾಣ ತಾಲೂಕಿನಲ್ಲಿ 3, ಬೀದರ್ ತಾಲೂಕಿನಲ್ಲಿ 2 ಸೇರಿದಂತೆ ಒಟ್ಟು 5 ಜನ ವಲಸೆ ಕಾರ್ಮಿಕರಿಗೆ ಕೊರೊನಾ ಪಾಸಿಟಿವ್ ಧೃಡವಾಗಿದೆ. ಮುಂಬೈ ಕಂಟಕ ಜಿಲ್ಲೆಯನ್ನು ಬಿಟ್ಟು ಬಿಡದೆ ಕಾಡುತ್ತಿದೆ. ಇಂದು ಕೂಡಾ ಮುಂಬೈ ಕಂಟಕದಿಂದಲೇ 5 ಕೊರೊನಾ ಸೋಂಕು ದೃಢವಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 502ಕ್ಕೇರಿದೆ.

ಜಿಲ್ಲೆಯ 502 ಸೋಂಕಿತರ ಪೈಕಿ 324 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಇನ್ನು 163 ಜನರಿಗೆ ಸೋಂಕು ಸಕ್ರಿಯವಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ಮಹಾಮಾರಿ 15 ಜನರನ್ನು ಬಲಿ ಪಡೆದಿದೆ. ಜಿಲ್ಲೆಯಲ್ಲಿ ಅಂತರ ರಾಜ್ಯದ ಆತಂಕ ಇದ್ದರೂ ಕೊರೊನಾ ನಿಯಮಗಳನ್ನು ಪಾಲನೆ ಮಾಡದೆ ಬೇಕಾಬಿಟ್ಟಿ ಸಂಚಾರ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಜಿಲ್ಲೆಗೆ ಬಾರಿ ಕಂಟಕ ಎದುರಾಗುವ ಆತಂಕ ಮೂಡಿದೆ.


Spread the love

About Laxminews 24x7

Check Also

ಆರೋಪಿ ಫಯಾಜ್‌ ನ್ಯಾಯಾಂಗ ಬಂಧನಕ್ಕೆ!

Spread the loveಹುಬ್ಬಳ್ಳಿ : ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯ ಹತ್ಯೆ(student murder) ಆರೋಪಿ ಫಯಾಜ್‌(Fayaz) ಎಂಬುವವನನ್ನ ಕೋರ್ಟ್‌ ಇಂದು ನ್ಯಾಯಾಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ