Breaking News

ಸಚಿವ ಡಾ.ಸುಧಾಕರ್ ತಂದೆ ನಂತರ ಮನೆಗೆಲಸದವನಿಗೂ ಕೊರೊನಾ ಸೋಂಕು ದೃಢ……..

Spread the love

ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಂದೆಯ ಬಳಿಕ ಮನೆಗೆಲಸದವನಿಗೂ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಡಾ.ಸುಧಾಕರ್ ತಂದೆ ಹಾಗೂ ಮನೆಗೆಲಸದವನಿಗೆ ಕೊರೊನಾ ಸೋಂಕು ತಗುಲಿದ ಹಿನ್ನೆಲೆ ಅವರ ಇಡೀ ಕುಟುಂಬವನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ. ಸಚಿವ ಡಾ.ಸುಧಾಕರ್, ಡಾ.ಸುಧಾಕರ್ ಪತ್ನಿ, ಇಬ್ಬರು ಮಕ್ಕಳು, 10ಕ್ಕೂ ಹೆಚ್ಚು ಮನೆಗೆಲಸದವರನ್ನು ಸದ್ಯ ಹೋಮ್ ಕ್ವಾರಂಟೈನ್ ಮಾಡಲಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ಕಟ್ಟುನಿಟ್ಟಿನ ಹೋಮ್ ಕ್ವಾರಂಟೈನ್ ಮಾಡಿದ್ದಾರೆ.

ಕೊರೊನಾ ಆತಂಕದ ಹಿನ್ನೆಲೆ ಸಚಿವರ ಕುಟುಂಬ ಕಟ್ಟುನಿಟ್ಟಿನ ನಿಯಮ ಪಾಲಿಸುತ್ತಿದ್ದು, ಸಾಮಾಜಿಕ ಅಂತರ ಕಾಯ್ದುಕೊಂಡು, ಇಮ್ಯುನಿಟಿ ಪವರ್ ಹೆಚ್ಚಿಸುವ ಆಹಾರ ಸೇವಿಸುತ್ತಿದ್ದಾರೆ. ಸ್ವತಃ ತಂದೆಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆ ಸಚಿವರು ಇಡೀ ಕುಟುಂಬಕ್ಕೆ ಧೈರ್ಯ ತುಂಬುತ್ತಿದ್ದಾರೆ. ಕಟ್ಟುನಿಟ್ಟಾಗಿ ಕೋವಿಡ್-19 ಮಾರ್ಗಸೂಚಿ ಪಾಲಿಸುತ್ತಿದ್ದು, ಕುಟುಂಬ ಸದಸ್ಯರಿಗೂ ಈ ಕುರಿತು ತಿಳಿ ಹೇಳುತ್ತಿದ್ದಾರೆ.

ಇಬ್ಬರು ಗಂಡು ಮಕ್ಕಳು ಮತ್ತು ಒಬ್ಬ ಮಗಳು ಒಟ್ಟು ಮೂವರು ಮಕ್ಕಳಿಗೂ ಸುಧಾಕರ್ ಧೈರ್ಯ ಹೇಳುತ್ತಿದ್ದಾರೆ. ಪ್ರಾಥಮಿಕ ಸಂಪರ್ಕ ಹೊಂದಿದ್ದ 14 ಹಾಗೂ ದ್ವಿತೀಯ ಹಂತದ ಸಂಪರ್ಕ ಹೊಂದಿದ್ದ 26 ಜನರನ್ನು ಆರೋಗ್ಯ ಇಲಾಖೆ ಗುರುತಿಸಿದ್ದು, ಕುಟುಂಬಸ್ಥರು ಮತ್ತು ಮನೆಗೆಲಸದವರ ಪಟ್ಟಿಯನ್ನು ಅಧಿಕಾರಿಗಳು ಪಡೆದಿದ್ದಾರೆ. ಈ ಪಟ್ಟಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಸಹ ಇದೆ

ಸಚಿವ ಸುಧಾಕರ್ ತಂದೆಯವರಿಗೆ 82ವರ್ಷ ವಯಸ್ಸಾಗಿದ್ದರಿಂದ ಮನೆಯೊಳಗೇ ಇರುತ್ತಿದ್ದರು. ಕುಟುಂಬಸ್ಥರು ಮತ್ತು ಮನೆಗೆಲಸದವರು ಮಾತ್ರ ಇವರ ಸಂಪರ್ಕದಲ್ಲಿದ್ದರು. ಹೊರಗಿನ ಯಾರ ಸಂಪರ್ಕವೂ ಇದ್ದಂತಿಲ್ಲ. ಆದರೂ ಕೊರೊನಾ ಸೋಂಕು ಹೇಗೆ ತಗುಲಿತು ಎಂಬ ಪ್ರಶ್ನೆ ಅಧಿಕಾರಿಗಳನ್ನು ಕಾಡುತ್ತಿದೆ. ಹೀಗಾಗಿ ತಲೆ ಕೆಡಿಸಿಕೊಂಡು ಅಧಿಕಾರಿಗಳು ಹಿಸ್ಟರಿ ಪರಿಶೀಲಿಸುತ್ತಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ