Breaking News

ಡ್ರೋನ್​ ಪ್ರತಾಪ್​ಗೆ 10 ದಿನ ನ್ಯಾಯಾಂಗ ಬಂಧನ

Spread the love

ಡಿಸೆಂಬರ್​ 16: ಕೃಷಿ ಹೊಂಡಕ್ಕೆ ಸೋಡಿಯಂ (Sodium) ಎಸೆದು ಸ್ಫೋಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್‌ಗೆ (Drone Pratap) ಡಿಸೆಂಬರ್‌ 26ರವರೆಗೂ ನ್ಯಾಯಾಂಗ ಬಂಧನ ಮಧುಗಿರಿಯ ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ. ಅನುಮತಿ ಇಲ್ಲದೇ ಸ್ಫೋಟಗೊಳಿಸಿದ್ದಕ್ಕೆ ಡ್ರೋನ್​ ಪ್ರತಾಪ್​ನನ್ನು ಮಿಡಿಗೇಶಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಸೋಮವಾರ (ಡಿ.16) ನ್ಯಾಯಾಲಯದ ಮುಂದೆ ಹಾಜಪಡಿಸಿದರು.

ತುಮಕೂರು ‌ಜಿಲ್ಲೆಯ ಮಧುಗಿರಿ ತಾಲೂಕಿನ ಜನಕಲೋಟಿ ಬಳಿ ಕೃಷಿ ಹೊಂಡಕ್ಕೆ ಸೋಡಿಯಂ ಎಸೆದು ಸ್ಫೋಟಿಸಿದ್ದಾರೆ ಎಂಬ ಆರೋಪದ ಮೇಲೆ ಡ್ರೋನ್​ ಪ್ರತಾಪ್​ ಅವರನ್ನು ಕಳೆದ ಗುರುವಾರ (ಡಿಸೆಂಬರ್​ 12) ಮಿಡಿಗೇಶಿ ಪೊಲೀಸರ ಬಂಧಿಸಿದ್ದರು. ಬಳಿಕ, ಪೊಲೀಸರು ಡ್ರೋನ್​ ಪ್ರತಾಪ್​ನನ್ನು ಶುಕ್ರವಾರ (ಡಿಸೆಂಬರ್​ 13) ರಂದು ‌ಮಧುಗಿರಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಪೊಲೀಸರ ಮನವಿ ಮೇರೆಗೆ ನ್ಯಾಯಾಲಯ ಡ್ರೋನ್​ ಪ್ರತಾಪ್​ ಅವರನ್ನು ಪೊಲೀಸ್​ ಕಸ್ಟಡಿಗೆ ನೀಡಿದ್ದರು.

ಸೋಮವಾರ (ಡಿ.16) ಪೊಲೀಸ್​ ಕಸ್ಟಡಿ ಅಂತ್ಯವಾಗಿದ್ದು, ಪೊಲೀಸರು ಡ್ರೋನ್​ ಪ್ರತಾಪ್​ ಅವರನ್ನು ನಾಯ್ಯಾಲಯದ ಮುಂದೆ ಹಾಜರುಪಡಿಸಿದರು. ನ್ಯಾಯಾಲಯ ಡ್ರೋನ್​ ಪ್ರತಾಪ್​ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿದೆ.


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ