ಒಕ್ಕಲಿಗರ ಸಂಘದ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೆಕುಮಾರಸ್ವಾಮಿ ಅವರಿಗೆ ಮುಖಭಂಗ
Laxminews 24x7
ಡಿಸೆಂಬರ್ 16, 2024
ರಾಜಕೀಯ, ರಾಜ್ಯ
185 Views
ಚನ್ನಪಟ್ಟಣ ಉಪಚುನಾವಣೆಯಲ್ಲಿ ಸೋಲು ಅನುಭವಿಸಿದ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೊಂದು ಮುಖಭಂಗ ಉಂಟಾಗಿದೆ. ಡಿಕೆ ಶಿವಕುಮಾರ್ ಬಣದ ಕೆಂಚಪ್ಪ ಗೌಡ ಅವರು 21 ಮತಗಳೊಂದಿಗೆ ಗೆದ್ದಿದ್ದಾರೆ.
ಕುಮಾರಸ್ವಾಮಿ ಬಣದ ಡಾ. ಆಂಜಿನಪ್ಪ ಅವರು 14 ಮತಗಳನ್ನು ಪಡೆದುಕೊಂಡಿದ್ದಾರೆ.ವ್ರ ಕುತೂಹಲ ಮೂಡಿಸಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮುಖಭಂಗ ಅನುಭವಿಸಿದ್ದ ಹೆಚ್ಡಿ ಕುಮಾರಸ್ವಾಮಿಗೆ (HD Kumaraswamy) ಇದೀಗ ಒಕ್ಕಲಿಗರ ಸಂಘದ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೆ ಮುಖಭಂಗವಾಗಿದೆ. ಕಾರಣ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಡಿಸಿಎಂ ಡಿಕೆ ಶಿವಕುಮಾರ್ ಬಣದ ಕೆಂಚಪ್ಪ ಗೌಡ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ.