Breaking News

ಸುವರ್ಣಸೌಧದೊಳಗೆ ಅಂಬೇಡ್ಕರ್, ಸುಭಾಷ್ ಚಂದ್ರಬೋಸ್, ಸ್ವಾಮಿ ವಿವೇಕಾನಂದ ಸೇರಿದಂತೆ ಗಣ್ಯರ ತೈಲ ಕಲಾಕೃತಿಗಳನ್ನು ಸಿಎಂ ಸಿದ್ದರಾಮಯ್ಯ ಅನಾವರಣಗೊಳಿಸಿದರು.

Spread the love

ಬೆಳಗಾವಿ: ಡಾ. ಬಿ. ಆರ್. ಅಂಬೇಡ್ಕರ್, ಸ್ವಾಮಿ ವಿವೇಕಾನಂದ ಮತ್ತು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಮರು ವಿನ್ಯಾಸಗೊಂಡ ಹಾಗೂ ದೇಶದ ಪ್ರಥಮ ರಾಷ್ಟ್ರಪತಿ ಡಾ. ಬಾಬು ರಾಜೇಂದ್ರಪ್ರಸಾದ್, ದೇಶದ ಪ್ರಥಮ ಪ್ರಧಾನಿ ಪಂಡಿತ್ ಜವಹರಲಾಲ್ ನೆಹರು, ದೇಶದ ಪ್ರಥಮ ಶಿಕ್ಷಣ ಸಚಿವ ಮೌಲಾನಾ ಅಬುಲ್ ಕಲಾಂ ಆಜಾದ್ ಮತ್ತು ದೇಶದ ಪ್ರಥಮ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ ಅವರ ತೈಲ ಕಲಾಕೃತಿಗಳನ್ನು ಸುವರ್ಣಸೌಧದ ಸದನದ ಒಳಗೆ ಸಿಎಂ ಸಿದ್ದರಾಮಯ್ಯ ಅನಾವರಣಗೊಳಿಸಿದರು.

ಕಾರ್ಯಕ್ರಮದಲ್ಲಿ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್, ಪ್ರತಿಪಕ್ಷದ ನಾಯಕ ಆರ್. ಅಶೋಕ್, ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ಸಚಿವರಾದ ಸತೀಶ್ ಜಾರಕಿಹೊಳಿ, ಹೆಚ್.ಕೆ. ಪಾಟೀಲ್, ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ಸಂಪುಟದ ಇತರೆ ಸಚಿವರು ಹಾಗೂ ಶಾಸಕರು ಉಪಸ್ಥಿತರಿದ್ದರು.ಈಗಾಗಲೇ ಸದನದೊಳಗೆ ಬಸವಣ್ಣ, ಮಹಾತ್ಮ ಗಾಂಧಿ, ಸರ್ದಾರ್ ವಲ್ಲಭಭಾಯಿ ಪಟೇಲ್, ಬಿ.ಆರ್. ಅಂಬೇಡ್ಕರ್, ವೀರ ಸಾವರ್ಕರ್, ಸುಭಾಷ್ ಚಂದ್ರ ಬೋಸ್, ಸ್ವಾಮಿ ವಿವೇಕಾನಂದ ಭಾವಚಿತ್ರ ಅಳವಡಿಸಲಾಗಿದೆ. ಅದಕ್ಕೆ ಈಗ ಹೊಸದಾಗಿ ಜವಾಹರಲಾಲ್ ನೆಹರು, ಇಂದಿರಾ ಗಾಂಧಿ, ಡಾ. ಬಾಬು ರಾಜೇಂದ್ರಪ್ರಸಾದ್, ದೇಶದ ಪ್ರಥಮ ಶಿಕ್ಷಣ ಸಚಿವ ಮೌಲಾನಾ ಅಬುಲ್ ಕಲಾಂ ಆಜಾದ್ ಭಾವಚಿತ್ರ ಅಳವಡಿಸಲಾಗಿದೆ.


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ