Breaking News

ಗಾಂಧಿ ಅಧ್ಯಕ್ಷತೆಯ ಬೆಳಗಾವಿ ಕಾಂಗ್ರೆಸ್​ ಅಧಿವೇಶನದ ಶತಮಾನೋತ್ಸವ ಪ್ರತಿ ಕಾಂಗ್ರೆಸ್ಸಿಗನಿಗೂ ಹೆಮ್ಮೆ

Spread the love

ಬೆಳಗಾವಿ: “1924ರ ಡಿಸೆಂಬರ್ 26ರಂದು ಬೆಳಗಾವಿಯಲ್ಲಿ ಮಹಾತ್ಮಾ ಗಾಂಧೀಜಿ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಅಧಿವೇಶನ ನಡೆದಿತ್ತು. ಇಂದು ನಾವು ಆ ದಿನದ 100 ವರ್ಷಗಳನ್ನು ಪೂರೈಸಿದ್ದೇವೆ. ಇದು ಪ್ರತಿಯೊಬ್ಬ ಕಾಂಗ್ರೆಸ್ಸಿಗನಿಗೂ ಹೆಮ್ಮೆಯ ವಿಷಯ” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹೇಳಿದರು.

ಬೆಳಗಾವಿ ನಗರದ ಕಾಂಗ್ರೆಸ್ ಕಚೇರಿಯಲ್ಲಿಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಜೊತೆಗೂಡಿ ಜಂಟಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

aicc-general-secretary-k-c-venugopal

“ಬೆಳಗಾವಿ ಕಾಂಗ್ರೆಸ್ ಅಧಿವೇಶನ ಭಾರತೀಯ ರಾಜಕಾರಣದಲ್ಲಿಯೇ ಐತಿಹಾಸಿಕ. ಕರ್ನಾಟಕ ಸರ್ಕಾರ ಶತಮಾನೋತ್ಸವ ಸಮಾವೇಶವನ್ನು ಯಶಸ್ವಿಗೊಳಿಸುವ ವಿಶ್ವಾಸವಿದೆ. ಸಿಡಬ್ಲೂಸಿ ಸದಸ್ಯರು, ಎಲ್ಲ ಪಿಸಿಸಿ ಅಧ್ಯಕ್ಷರು, ಸದಸ್ಯರು ಭಾಗಿಯಾಗಲಿದ್ದಾರೆ. ಡಿಸೆಂಬರ್ 26ರಂದು ಸಿಡಬ್ಲೂಸಿ ಸಭೆ ನಡೆಯುತ್ತೆ. ಕಾಂಗ್ರೆಸ್ ಐಡಿಯಾಲಜಿ ಕುರಿತು ಚರ್ಚೆ ಆಗುತ್ತದೆ” ಎಂದು ಅವರು ತಿಳಿಸಿದರು.

“ನಾವು ಸಮಾನತೆಯ ಬಗ್ಗೆ ಪ್ರೀತಿ, ಸೌಹಾರ್ದತೆಯ ಬಗ್ಗೆ ಮಾತನಾಡುತ್ತಿದ್ದೇವೆ. ಬಿಜೆಪಿಯವರು ಕೇವಲ ದ್ವೇಷ ಹಬ್ಬಿಸುತ್ತಿದ್ದಾರೆ. ಹಿಂದೂ-ಮುಸ್ಲಿಂ, ಹಿಂದೂ-ಕ್ರಿಶ್ಚಿಯನ್ ಮಧ್ಯೆ ದ್ವೇಷ ಹೆಚ್ಚಿಸುವುದೇ ಅವರ ಅಜೆಂಡಾ” ಎಂದು ಅವರು ಇದೇ ವೇಳೆ ಟೀಕಿಸಿದರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ